ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಬಹುಮತ ಹೊಂದಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಬಂಗಾವ್‌ನಲ್ಲಿ ಭಾರತೀಯ ಜನತಾ ಪಕ್ಷದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ನಾಲ್ಕು ಹಂತದ ಮತದಾನ ಪೂರ್ಣಗೊಂಡಿದ್ದು, 380 ಸ್ಥಾನಗಳನ್ನು ಎಣಿಸಲಾಗಿದೆ.
ಬಂಗಾಳದಲ್ಲಿ 18 ಸ್ಥಾನಗಳಿಗೆ ಮತದಾನ ಮುಗಿದಿದೆ. ಇದುವರೆಗೆ 380 ಕ್ಷೇತ್ರಗಳಲ್ಲಿ ಪ್ರಧಾನಿ ಮೋದಿ 270 ಸ್ಥಾನಗಳನ್ನು ಗೆದ್ದಿದ್ದಾರೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು.