ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, August 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದೇಶದ 80 ಕೋಟಿ ಜನರಿಗೆ ದೀಪಾವಳಿಯವರೆಗೂ ಉಚಿತ ಧಾನ್ಯ ವಿತರಣೆ: ಪ್ರಧಾನಿ ಮೋದಿ ಘೋಷಣೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದ 80 ಕೋಟಿ ಜನರಿಗೆ ದೀಪಾವಳಿಯವರೆಗೂ ಉಚಿತ ಧಾನ್ಯ ವಿತರಣೆ ಮಾಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಘೊಷಿಸಿದ್ದಾರೆ.
ಈ ವರ್ಷ ಮೇ, ಜೂನ್‌ ತಿಂಗಳುಗಳಲ್ಲಿ ಉಚಿತ ಆಹಾರ ಧಾನ್ಯ ವಿತರಣೆ ಮಾಡಲು ಸೂಚಿಸಲಾಗಿತ್ತು. ಬಡವರು ಯಾರೂ ಹಸಿವಿನಿಂದ ಮಲಗಬಾರದು ಎಂದು ಇದನ್ನು ವಿಸ್ತರಿಸಿ ದೀಪಾವಳಿವರೆಗೂ ಉಚಿತವಾಗಿ ಆಹಾರ ಧಾನ್ಯ ನೀಡುತ್ತೇವೆ. ನವೆಂಬರ್​ ತಿಂಗಳವರೆಗೂ ಆಹಾರ ಧಾನ್ಯ ವಿತರಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಮತ್ತೆ ವಿಸ್ತರಿಸಲಾಗಿದ್ದು, ದೇಶದ 80 ಕೋಟಿ ಜನರಿಗೆ ನವಂಬರ್ ವರೆಗೂ ಉಚಿತವಾಗಿ ಆಹಾರಧಾನ್ಯ ವಿತರಿಸಲಾಗುವುದು ಎಂದು ಭಾಷಣದಲ್ಲಿ ಪ್ರಧಾನಿ ಮೋದಿ ತಿಳಿಸಿದ್ದಾರೆ.
ಯಾವ ನಾಗರಿಕರು ಹಸಿವಿನಿಂದ ಬಳಲಬಾರದು. ಬಡವರು ಹಸಿವಿನಿಂದ ಮಲಗಬಾರದು. ಹಾಗಾಗಿ, ನವೆಂಬರ್ ವರೆಗೂ ಅಂದರೆ ದೀಪಾವಳಿವರೆಗೆ ಉಚಿತವಾಗಿ ಆಹಾರ ಧಾನ್ಯ ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss