ಕುಂದಾನಗರಿ ಬೆಳಗಾವಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಶಿವಮೊಗ್ಗದ ನೂತನ ಏರ್‌ಪೋರ್ಟ್‌ ಉದ್ಘಾಟನಾ ಕಾರ್ಯಕ್ರಮದ ಬಳಿಕ ಕುಂದಾನಗರಿ ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ.

ಬೆಳಗಾವಿ ಸಾಂಬ್ರಾ ಏರ್​ಪೋರ್ಟ್​ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಎಡಿಜಿಪಿ ಅಲೋಕ್ ಕುಮಾರ್, ​ಬೆಳಗಾವಿ ಪ್ರಾದೇಶಿಕ ಆಯುಕ್ತ ಎಂ.ಜಿ.ಹಿರೇಮಠ, ಸಂಜಯ್ ಪಾಟೀಲ್ ಸ್ವಾಗತಿಸಿದರು.

ಶಿವಮೊಗ್ಗದಿಂದ ವಾಯುಪಡೆ ವಿಮಾನದಲ್ಲಿ ಆಗಮಿಸಿದ ಮೋದಿ ಇದೀಗ ಬೆಳಗಾವಿಯ ಕೆಎಸ್​ಆರ್​ಪಿ ಮೈದಾನಕ್ಕೆ ತಲುಪಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!