ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಇಂದು ತಮ್ಮ ಸಂಪುಟದ ಸಚಿವ ಮತ್ತು ತೆಲಂಗಾಣ ಬಿಜೆಪಿ ಅಧ್ಯಕ್ಷ ಜಿ. ಕಿಶನ್ ರೆಡ್ಡಿ ಅವರ ನಿವಾಸದಲ್ಲಿ ನಡೆದ ಸಂಕ್ರಾಂತಿ ಆಚರಣೆಯಲ್ಲಿ ಭಾಗವಹಿಸಿದರು.
ತಮ್ಮ ಎಕ್ಸ್ ಖಾತೆಯಲ್ಲಿ ಸಂಕ್ರಾಂತಿಯ ಶುಭಾಶಯ ಕೋರಿರುವ ಪ್ರಧಾನಿ ಮೋದಿ, “ನನ್ನ ಸಚಿವ ಸಹೋದ್ಯೋಗಿ ಜಿ.ಕಿಶನ್ ರೆಡ್ಡಿ ಅವರ ನಿವಾಸದಲ್ಲಿ ನಡೆದ ಸಂಕ್ರಾಂತಿ ಮತ್ತು ಪೊಂಗಲ್ ಆಚರಣೆಗಳಲ್ಲಿ ನಾನು ಭಾಗವಹಿಸಿದ್ದೆ. ಅಲ್ಲಿ ಆಯೋಜಿಸಿದ್ದ ಅದ್ಭುತ ಸಾಂಸ್ಕೃತಿಕ ಕಾರ್ಯಕ್ರಮವನ್ನೂ ನಾನು ಆನಂದಿಸಿದೆ. ಭಾರತದಾದ್ಯಂತ ಜನರು ಸಂಕ್ರಾಂತಿ ಮತ್ತು ಪೊಂಗಲ್ ಅನ್ನು ಬಹಳ ಉತ್ಸಾಹದಿಂದ ಆಚರಿಸುತ್ತಾರೆ. ಇದು ನಮ್ಮ ಸಂಸ್ಕೃತಿ ಮತ್ತು ಕೃಷಿ ಸಂಪ್ರದಾಯಗಳನ್ನು ಗೌರವಿಸುವ ಹಬ್ಬವಾಗಿದೆ. ಎಲ್ಲರಿಗೂ ಸಂಕ್ರಾಂತಿ ಮತ್ತು ಪೊಂಗಲ್ ಶುಭಾಶಯಗಳು” ಎಂದು ಪೋಸ್ಟ್ ಮಾಡಿದ್ದಾರೆ.