ನಟ ತಾರಕ ರತ್ನ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ನಟ ತಾರಕ ರತ್ನ ಸಾವಿನ ಸುದ್ದಿಯನ್ನು ಅರಗಿಸಿಕೊಳ್ಳಲು ತೆಲುಗು ಜನತೆಗೆ ಸಾಧ್ಯವಾಗುತ್ತಿಲ್ಲ. ಸತತ 23 ದಿನಗಳ ಕಾಲ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅವರು ಶನಿವಾರ ಕೊನೆಯುಸಿರೆಳೆದಿದ್ದಾರೆ.

ತಾರಕ ರತ್ನ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಹೈದರಾಬಾದ್‌ನ ಮೋಕಿಲಾದಲ್ಲಿರುವ ಅವರ ನಿವಾಸಕ್ಕೆ ಸ್ಥಳಾಂತರಿಸಲಾಯಿತು. ತಾರಕ ರತ್ನ ಅವರ ನಿಧನ ಸಿನಿ ಲೋಕವನ್ನು ದುರಂತದಲ್ಲಿ ಮುಳುಗಿಸಿದೆ. ಅವರ ಹಠಾತ್ ನಿಧನಕ್ಕೆ ಹಲವು ಚಿತ್ರರಂಗದ ತಾರೆಯರು ಕಂಬನಿ ಮಿಡಿದಿದ್ದಾರೆ. ತಾರಕ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರಧಾನಿ ಮೋದಿ ತಮ್ಮ ಟ್ವಿಟರ್‌ನಲ್ಲಿ, ”ಶ್ರೀ ನಂದಮೂರಿ ತಾರಕ ರತ್ನ ಅವರ ಅಕಾಲಿಕ ನಿಧನದಿಂದ ನೋವಾಗಿದೆ. ಅವರು ಚಲನಚಿತ್ರಗಳು ಮತ್ತು ಮನರಂಜನೆಯ ಜಗತ್ತಿನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ಇರಲಿವೆ. ಓಂ ಶಾಂತಿ: PM @narendramodi.” ಎಂದು ಟ್ವೀಟ್‌ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!