ಹೊಸದಿಗಂತ ಡಿಜಿಟಲ್ ಡೆಸ್ಕ್ :
ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಹೆಚ್‌ಎಎಲ್ ಏರ್ಪೋರ್ಟ್ಗೆ ಆಗಮಿಸಿದ್ದಾರೆ. ಎಲ್ಲೆಡೆ ಬಿಗಿಭದ್ರತೆಯನ್ನು ಒದಗಿಸಲಾಗಿದೆ.
ಹೆಚ್‌ಎಎಲ್ ಏರ್‌ಪೋರ್ಟ್‌ನಲ್ಲಿ ಮೋದಿಗೆ ಸಚಿವ ಭೈರತಿ ಬಸವರಾಜ, ಸಂಸದ ಪಿ.ಸಿ.ಮೋಹನ್, ಶಾಸಕ ಅರವಿಂದ ಲಿಂಬಾವಳಿ, ಸಿಎಸ್ ವಂದಿತಾ ಶರ್ಮಾ, ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್, ಬೆಂಗಳೂರು ನಗರ ಡಿಸಿ ದಯಾನಂದ ಮತ್ತು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸ್ವಾಗತಿಸಿದರು.
ಇಂದು 11.30ರ ಸುಮಾರಿಗೆ ಬೆಂಗಳೂರಿನಲ್ಲಿ 2023ರ ಇಂಧನ ಸಪ್ತಾಹವನ್ನು ಉದ್ಘಾಟಿಸಲಿದ್ದಾರೆ. ನಂತರ 3.30 ಕ್ಕೆ ತುಮಕೂರಿನಲ್ಲಿ ಎಚ್ಎಎಲ್ ಹೆಲಿಕಾಪ್ಟರ್ ಕಾರ್ಖಾನೆಯನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ ಜೊತೆಗೆ ಹಲವಾರು ಅಭಿವೃದ್ದಿ ಯೋಜನೆಗಳಿಗೆ ಪ್ರಧಾನಮಂತ್ರಿ ಅವರು ಶಿಲಾನ್ಯಾಸ ನೆರವೇರಿಸಲಿದ್ದಾರೆ.