ಕರ್ತವ್ಯ ಪಥ ಕುರಿತ ಚಿಕ್ಕ ‘ನಕಾಶೆ’ ಬಿಡುಗಡೆಗೊಳಿಸಿದ ಪ್ರಧಾನಿ ನರೇಂದ್ರ ಮೋದಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರು ಕರ್ತವ್ಯ ಪಥದ ಕುರಿತಾದ ಚಿಕ್ಕ ನಕಾಶೆಯನ್ನು (ಪ್ಯಾಕೆಟ್‌ ಮ್ಯಾಪ್‌) ಗುರುವಾರ ಬಿಡುಗಡೆ ಮಾಡಿದ್ದಾರೆ.

ಪ್ರಗತಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ವಸ್ತು ಸಂಗ್ರಹಾಲಯ ಸಮ್ಮೇಳನದ ಉದ್ಘಾಟನೆ ವೇಳೆ ಮೋದಿ ಅವರು ಈ ನಕಾಶೆಯನ್ನು ಅನಾವರಣಗೊಳಿಸಿದರು.

ಇಂಡಿಯಾ ಗೇಟ್‌ ಸಂಕೀರ್ಣದಲ್ಲಿ ಇರುವ ವಿವಿಧ ರಾಜ್ಯಗಳಿಗೆ ಸಂಬಂಧಿಸಿದ ಭವನಗಳು ಹಾಗೂ ಐತಿಹಾಸಿಕ ಹಿನ್ನೆಲೆಯುಳ್ಳ ಸಾಂಸ್ಕೃತಿಕ ಸಂಸ್ಥೆಗಳ ಕುರಿತಾದ ಮಾಹಿತಿಯನ್ನು ಇದು ಒಳಗೊಂಡಿರಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!