ಭರೂಚ್‌ನಲ್ಲಿ 8,000 ಕೋಟಿ ರೂ.ಗಳ ವಿವಿಧ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಗುಜರಾತ್‌ನ ಭರೂಚ್ ಜಿಲ್ಲೆಯ ಅಮೋದ್‌ನಲ್ಲಿ 8,000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ವಿವಿಧ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟನೆ ಮಾಡಿದರು. ಬಿಜೆಪಿ ಆಡಳಿತವಿರುವ ರಾಜ್ಯದಲ್ಲಿ ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಮೋದಿ ಅವರು ಭಾನುವಾರದಿಂದ ಮೂರು ದಿನಗಳ ಕಾಲ ಗುಜರಾತ್‌ ಭೇಟಿಯಲ್ಲಿದ್ದಾರೆ. ಇಂದು ಜಂಬೂಸರ್‌ನಲ್ಲಿ ಬೃಹತ್ ಡ್ರಗ್ ಪಾರ್ಕ್ ಮತ್ತು ಭರೂಚ್ ಜಿಲ್ಲೆಯ ದಹೇಜ್‌ನಲ್ಲಿ ಆಳ ಸಮುದ್ರ ಪೈಪ್‌ಲೈನ್ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಜಿಲ್ಲೆಯ ಬಹು ಕೈಗಾರಿಕಾ ಪಾರ್ಕ್‌ಗಳ ಅಭಿವೃದ್ಧಿಗೆ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಇಂದು ಪ್ರಧಾನಿ ಮೋದಿ ಶೈಕ್ಷಣಿಕ ಸಂಕೀರ್ಣವನ್ನು ಉದ್ಘಾಟಿಸಿದರು. ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಸಂಕೀರ್ಣ, ಸಮಗ್ರ ಅಭಿವೃದ್ಧಿಯ ಜೊತೆಗೆ ವಿದ್ಯಾರ್ಥಿಗಳಿಗೆ ಸೌಲಭ್ಯಗಳನ್ನು ಒದಗಿಸಲು ಯೋಜನೆಯು ಸಹಾಯ ಮಾಡುತ್ತದೆ. ಜೊತೆಗೆ ಆನಂದ್ ಜಿಲ್ಲೆಯ ವಲ್ಲಭ ವಿದ್ಯಾನಗರದಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.

ಸಂಜೆ ಜಾಮ್‌ನಗರದಲ್ಲಿ 1,460 ಕೋಟಿ ರೂ.ಗಳ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಯೋಜನೆಗಳು ನೀರಾವರಿ, ವಿದ್ಯುತ್, ನೀರು ಸರಬರಾಜು ಮತ್ತು ನಗರ ಮೂಲಸೌಕರ್ಯಕ್ಕೆ ಸಂಬಂಧಿಸಿವೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!