ಶಿಂಜೋ ಅಬೆ ಅಂತ್ಯಕ್ರಿಯೆ: ಟೋಕಿಯೊದಲ್ಲಿ ಜಪಾನ್ ಪ್ರಧಾನಿ ಭೇಟಿಯಾದ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಂಗಳವಾರ ಮುಂಜಾನೆ ಜಪಾನ್‌ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಟೋಕಿಯೊದಲ್ಲಿ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಸಭೆ ನಡೆಸಿದರು. ಜುಲೈ 8 ರಂದು ನಾರಾ ನಗರದಲ್ಲಿ ಪ್ರಚಾರ ಭಾಷಣದ ವೇಳೆ ಗುಂಡಿನ ದಾಳಿಗೊಳಗಾದ ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಜಪಾನ್‌ಗೆ ಬಂದಿಳಿದಿದ್ದಾರೆ.

ಈ ಸಂದರ್ಭದಲ್ಲಿ ಜಪಾನ್‌ ಪ್ರಧಾನಿ ಜೊತೆ ಮಾತನಾಡಿದ ನರೇಂದ್ರ ಮೋದಿ, ʻಇಂದು ನಾವು ದುಃಖದ ಸಮಯದಲ್ಲಿ ಭೇಟಿಯಾಗುತ್ತಿದ್ದೇವೆ. ಕಳೆದ ಬಾರಿ ನಾನು ಜಪಾನ್‌ಗೆ ಬಂದಾಗ ಶಿಂಜೋ ಅಬೆ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದ್ದೆ. ಭಾರತವು ಶಿಂಜೋ ಅಬೆ ಅವರಂಥ ಉತ್ತಮ ಸ್ನೇಹಿತನನ್ನ ಕಳೆದುಕೊಂಡಿದೆ ಎಂದರು. ನಿಮ್ಮ ನಾಯಕತ್ವದಲ್ಲಿ ಭಾರತ-ಜಪಾನ್ ಸಂಬಂಧಗಳು ಬಲವಾಗಿ ಮತ್ತಷ್ಟು ಎತ್ತರಕ್ಕೆ ಏರುತ್ತವೆ ಎಂಬ ಆಶಾಭಾವನೆಯನ್ನು ವ್ಯಕ್ತಪಡಿಸಿದರು.

ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಅಂತ್ಯಕ್ರಿಯೆಗೆ ಬರುವ ವಿದೇಶಿ ಗಣ್ಯರಿಗೆ ಆತಿಥ್ಯ ವಹಿಸಲು ಸಕಲ ಸಿದ್ಧತೆ ನಡೆಯುತ್ತಿದೆ. ಜಪಾನ್ ರಾಜಧಾನಿ ಟೋಕಿಯೊದಲ್ಲಿ ಬಿಗಿ ಭದ್ರತಾ ಕ್ರಮಗಳನ್ನು ವಿಧಿಸಿದೆ. 18,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ವರದಿಯಾಗಿದೆ.

ಜಪಾನ್ ಟೈಮ್ಸ್ ಪ್ರಕಾರ, ಅಂತ್ಯಕ್ರಿಯೆಯ ವಿಧಿವಿಧಾನಗಳು ಸರಿಸುಮಾರು ಒಂದೂವರೆ ಗಂಟೆಗಳವರೆಗೆ ನಡೆಯಲಿದೆ. ನಂತರ ದೇಶದ ರಾಷ್ಟ್ರಗೀತೆಯನ್ನು ನುಡಿಸಲಾಗುತ್ತದೆ. ಪ್ರಧಾನ ಮಂತ್ರಿ ಫ್ಯೂಮಿಯೊ ಕಿಶಿಡಾ ಅವರು ಸ್ಮರಣಾರ್ಥ ಭಾಷಣ ಮಾಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!