ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಪ್ರಧಾನಮಂತ್ರಿ ಜನ ಧನ ಯೋಜನೆ (PMJDY)ಗೆ ಏಳುವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ, ಯೋಜನೆ ಪ್ರಾರಂಭಿಸಿ, ಯಶಸ್ವಿಗೊಳಿಸಲು ಶ್ರಮಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.
ಎರಡು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದ ಅಭಿವೃದ್ಧಿ ಪಥವನ್ನು ಪರಿವರ್ತಿಸಿದ ಪಿಎಂ ಜನ -ಧನ ಯೋಜನೆ ಶುರುವಾಗಿ ಏಳುವರ್ಷವಾಯಿತು. ಇದು ದೇಶದ ಅಸಂಖ್ಯಾತ ಜನರ ಆರ್ಥಿಕ ಸಬಲೀಕರಣಕ್ಕೆ ಕಾರಣವಾಗಿದೆ ಮತ್ತು ಪಾರದರ್ಶಕತೆಯಿಂದ ಕೂಡಿದೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ.
ಈ ಯೋಜನೆಯ ಯಶಸ್ವಿಗಾಗಿ ಶ್ರಮಿಸಿದ ಎಲ್ಲರ ಪ್ರಯತ್ನಗಳನ್ನು ನಾನು ಶ್ಲಾಘಿಸುತ್ತೇನೆ. ಅವರ ಪ್ರಯತ್ನವು ಭಾರತದ ಜನರು ಉತ್ತಮ ಗುಣಮಟ್ಟದ ನಡೆಸಲು ನೆರವಾಗಿದೆ. ಈ ಕಾರ್ಯಕ್ರಮದಡಿಯಲ್ಲಿ ತೆರೆಯಲಾದ 43.04 ಕೋಟಿ ಬ್ಯಾಂಕ್ ಖಾತೆಗಳ ಪೈಕಿ 36.86 ಕೋಟಿ ಖಾತೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ ನೀಡಿದ್ದಾರೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.