ವಿಡಿಯೋ: ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಪ್ರಸ್ತುತ ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಾಹ್ನ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಜುಲೈ 8 ರಂದು, ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶಿಂಜೋ ಅಬೆ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದರು. ಇಂದು ಟೋಕಿಯೋದಲ್ಲಿ ಶಿಂಜೋ ಅಬೆ ಅವರ ಅಂತ್ಯಕ್ರಿಯೆ ನಡೆಯಲಿದೆ. ಶಿಂಜೋ ಅಬೆಗೆ ಅಂತಿಮ ವಿದಾಯ ಹೇಳಲು ಸುಮಾರು 20 ರಾಷ್ಟ್ರಗಳ ಮುಖ್ಯಸ್ಥರು ಟೋಕಿಯೊಗೆ ತೆರಳಿದ್ದಾರೆ. ಅಲ್ಲದೆ, ಸುಮಾರು 100 ದೇಶಗಳ ಪ್ರತಿನಿಧಿಗಳು ಅಬೆ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಭಾರತದ ಪ್ರಧಾನಿ ಮೋದಿಯವರೂ ಸಹ ಜಪಾನ್‌ಗೆ ತೆರಳಿದ್ದು, ತಮ್ಮ ಆತ್ಮೀಯ ಸ್ನೇಹಿತನಿಗೆ ಅಂತಿಮ ನಮನವನ್ನು ಸಲ್ಲಿಸಿದರು. ಬಿಳಿ ಹೂವಿನ ಪುಷ್ಪಗುಚ್ಛ ಸಮರ್ಪಿಸಿ ನಮಸ್ಕಾರ ಮಾಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!