ಅಮೆರಿಕದ ಮಾಜಿ ಅಧ್ಯಕ್ಷ ಒಬಾಮಾಗೆ ಕೊರೋನಾ: ಬೇಗ ಗುಣಮುಖರಾಗಲಿ ಎಂದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಈ ಹಿನ್ನೆಲೆ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹಾರೈಸಿದ್ದಾರೆ.
ಕೋವಿಡ್​ನಿಂದ ಬರಾಕ್ ಒಬಾಮ ಬೇಗ ಚೇತರಿಕೆಕೊಳ್ಳಬೇಕು ಮತ್ತು ಮತ್ತು ನಿಮ್ಮ ಕುಟುಂಬದ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ನಾನು ಶುಭ ಕೋರುತ್ತೇನೆ ಎಂದು ಪ್ರಧಾನಿ ಮೋದಿ ತಮ್ಮ ಟ್ವೀಟ್​ನಲ್ಲಿ ತಿಳಿಸಿದ್ದಾರೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಬರಾಕ್ ಒಬಾಮಾಗೆ ಕೋವಿಡ್ ಸೋಂಕು ತಗುಲಿದ್ದು ಅವರು ‘ನಾನು ಕೋವಿಡ್‌ಗೆ ಧನಾತ್ಮಕ ಪರೀಕ್ಷೆ ಮಾಡಿದ್ದೇನೆ. ನನಗೆ ಒಂದೆರಡು ದಿನಗಳಿಂದ ಗಂಟಲು ನೋವು ಇತ್ತು, ಆದರೂ ಆರೋಗ್ಯವಾಗಿದ್ದೇನೆ.ಲಸಿಕೆ ತೆಗೆದುಕೊಂಡಿದ್ದರಿಂದ ನಾನು ಮತ್ತು ಮಿಚೆಲ್ ಕೃತಜ್ಞರಾಗಿರುತ್ತೇವೆ ಮತ್ತು ಅವರಿಗೆ ಕೋವಿಡ್ ನೆಗೆಟಿವ್ ಬಂದಿದೆ’ ಎಂದು ಒಬಾಮಾ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!