ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ಶ್ರೀ ಸೋಮನಾಥ ಜ್ಯೋತಿರ್ಲಿಂಗ ಮಂದಿರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಮೂರು ದಿನಗಳ ಭೇಟಿಗಾಗಿ ಪ್ರಧಾನಿ ಮೋದಿ ಗುಜರಾತ್‌ಗೆ ಆಗಮಿಸಿದ್ದು, ಜಾಮ್‌ನಗರ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೂಲಕ ವಿಶ್ವ ವನ್ಯಜೀವಿ ದಿನದ ಸಂದರ್ಭದಲ್ಲಿ ಪ್ರಧಾನಿ ಮೋದಿ ನಾಳೆ ಗುಜರಾತ್‌ನ ಜುನಾಗಡ್ ಜಿಲ್ಲೆಯ ಸಸಂಗೀರ್‌ಗೆ ಭೇಟಿ ನೀಡಲಿದ್ದಾರೆ.
ಇದಕ್ಕೂ ಮುನ್ನ ಭಾರತಕ್ಕೆ ಭೇಟಿ ನೀಡಿರುವ ಆಸ್ಟ್ರೇಲಿಯಾದ ಮಾಜಿ ಪ್ರಧಾನಿ ಟೋನಿ ಅಬಾಟ್ ಅವರನ್ನು ಪ್ರಧಾನಿ ಮೋದಿ ಭೇಟಿಯಾದರು.