ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡಲು ತಮ್ಮ ಬೆಂಗಾವಲು ವಾಹನ ನಿಲ್ಲಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡಲು ಪ್ರಧಾನಿ ನರೇಂದ್ರ ಮೋದಿ ತಮ್ಮ ಬೆಂಗಾವಲು ಪಡೆಯನ್ನು ತಡೆದ ಘಟನೆ ಹಿಮಾಚಲಪ್ರದೇಶದಲ್ಲಿ ನಡೆದಿದೆ. ಇದೇ ತಿಂಗಳ 12ರಂದು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಅಲ್ಲಿ ಬಹಿರಂಗ ಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಚಂಬಿ ಪ್ರದೇಶದ ಮಾರ್ಗವಾಗಿ ಕಾಂಗ್ಡಾ ಜಿಲ್ಲೆಗೆ ತೆರಳುತ್ತಿದ್ದರು.

ಈ ಸಮಯದಲ್ಲಿ ಮೋದಿ ಅವರನ್ನು ನೋಡಲು ಸಾಕಷ್ಟು ಮಂದಿ ರಸ್ತೆ ಬದಿ ನೆರೆದಿದ್ದರು. ಅದೇ ವೇಳೆ ಆ ಮಾರ್ಗದಲ್ಲಿ ಆಂಬ್ಯುಲೆನ್ಸ್ ಬರುತ್ತಿದ್ದನ್ನು ಕಂಡ ಮೋದಿ ಕೂಡಲೇ ತಮ್ಮ ಬೆಂಗಾವಲು ವಾಹನವನ್ನು ನಿಲ್ಲಿಸಿ ಆಂಬ್ಯುಲೆನ್ಸ್ ಹೋಗಲು ದಾರಿ ಮಾಡಿಕೊಟ್ಟರು. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದೇ ವೇಳೆ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ ಕಾಂಗ್ರೆಸ್ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹಿಮಾಚಲ ಪ್ರದೇಶದಲ್ಲಿ ಡಬಲ್ ಇಂಜಿನ್ ಸರ್ಕಾರ ಬರಬೇಕು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!