ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ರೀಸ್‌ನಿಂದ ನೇರವಾಗಿ ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ, ಹೆಚ್‌ಎಎಲ್ ಏರ್‌ಪೋರ್ಟ್‌ನಲ್ಲಿ ಮಾತನಾಡುವ ವೇಳೆ ರಾಜ್ಯಪಾಲರು ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ, ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಧನ್ಯವಾದ ತಿಳಿಸಿದರು.
ಭಾರತದಲ್ಲಿ ಬೆಳಕು ಹರಿದಿದೆ, ಆ ಬೆಳಕಿನಲ್ಲಿ ಬೆಂಗಳೂರಿಗರ ಮುಖ ಕಂಡಿದೆ. ವಿದೇಶದಲ್ಲಿರುವಾಗಲೇ ನೇರವಾಗಿ ಬೆಂಗಳೂರಿಗೆ ಬರಬೇಕೆಂದು ತೀರ್ಮಾನ ಮಾಡಿದೆ. ಅದಕ್ಕೆ ಅತೀ ಶೀಘ್ರದಲ್ಲೇ ಸಕಲ ವ್ಯವಸ್ಥೆ ಮಾಡಿದ ರಾಜ್ಯಪಾಲರು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರಿಗೆ ನನ್ನ ಧನ್ಯವಾದ ಎಂದು ಮೋದಿ ಹೇಳಿದರು.
ನಮ್ಮ ವಿಜ್ಞಾನಿಗಳ ಸಾಧನೆ ಬಗ್ಗೆ ಇಡೀ ವಿಶ್ವವೇ ಹೆಮ್ಮೆ ಪಡುತ್ತಿದೆ. ನಮ್ಮ ವಿಜ್ಞಾನಿಗಳನ್ನು ಜಗತ್ತಿನಾದ್ಯಂತ ದೇಶಗಳು ಗೌರವದಿಂದ ಕಾಣುವ ಕಾಲ ಶುರುವಾಗಿದೆ. ಚಂದ್ರಯಾನ ಯಶಸ್ಸಿನ ಮೂಲಕ ನಮ್ಮವರ ಶಕ್ತಿ ಇಡೀ ವಿಶ್ವಕ್ಕೆ ಗೊತ್ತಾಗಿದೆ. ವಿದೇಶದಲ್ಲಿರುವಾಗಲೇ ಇಸ್ರೋ ಸಂಸ್ಥೆಗೆ ಭೇಟಿ ನೀಡಲು ನಿರ್ಧರಿಸಿದ್ದು, ಹಾಗಾಗಿ ನೇರವಾಗಿ ವಿಜ್ಞಾನಿಗಳಿಗೆ ಭೇಟಿಗೆ ಬಂದಿದ್ದೇನೆ ಎಂದು ಮೋದಿ ಹೇಳಿದರು.