ಪ್ರಧಾನಿ ಮೋದಿಯವರ ಮನ್ ಕಿ ಬಾತ್: ಇಂದು 101ನೇ ಸಂಚಿಕೆ ಪ್ರಸಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪ್ರಧಾನಿ ನರೇಂದ್ರ ಮೋದಿಯವರ ರೇಡಿಯೊ ಕಾರ್ಯಕ್ರಮ ಮನ್‌ ಕಿ ಬಾತ್‌ 101ನೇ ಸಂಚಿಕೆಯು ಇಂದು ಪ್ರಸಾರವಾಗಲಿದೆ.
ಮೋದಿಯವರು ಇಂದು ಬೆಳಗ್ಗೆ 11 ಗಂಟೆಗೆ ದೇಶ ಮತ್ತು ವಿದೇಶದ ಜನರೊಂದಿಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ.

ಈ ಕಾರ್ಯಕ್ರಮವನ್ನು ಆಕಾಶವಾಣಿ ಮತ್ತು ದೂರದರ್ಶನದ ಎಲ್ಲ ನೆಟ್‌ವರ್ಕ್, ಆಕಾಶವಾಣಿ ವೆಬ್‌ಸೈಟ್ ಮತ್ತು ನ್ಯೂಸನ್ ಏರ್ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ. ಇದನ್ನು ಆಕಾಶವಾಣಿ, ಡಿಡಿ ನ್ಯೂಸ್, ಪಿಎಂಒ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಯೂಟ್ಯೂಬ್ ಚಾನೆಲ್‌ಗಳಲ್ಲಿ ಲೈವ್-ಸ್ಟ್ರೀಮ್ ಮಾಡುತ್ತದೆ. ಆಕಾಶವಾಣಿ ಹಿಂದಿ ಪ್ರಸಾರವಾದ ತಕ್ಷಣ ಪ್ರಾದೇಶಿಕ ಭಾಷೆಗಳಲ್ಲಿ ಕಾರ್ಯಕ್ರಮವನ್ನು ಪ್ರಸಾರ ಮಾಡಲಾಗುತ್ತದೆ.

ಅಕ್ಟೋಬರ್ 3, 2014 ರಿಂದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದ ಮೂಲಕ ದೇಶದ ನಾಗರಿಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ.

ಕಳೆದ ತಿಂಗಳು (ಏಪ್ರಿಲ್ 30)ರಂದು ಮನ್ ಕಿ ಬಾತ್ ನ 100ನೇ ಸಂಚಿಕೆ ಪ್ರಸಾರವಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ಮನ್​ ಕೀ ಬಾತ್ ಕೇವಲ ಕಾರ್ಯಕ್ರಮವಲ್ಲ ಜನರೇ ದೇವರು. ಇದು ವ್ರತ ಇದ್ದಂತೆ ಎಂದು ಹೇಳಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!