ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆನಡಾದಲ್ಲಿ ಇದೇ 15ರಿಂದ 17ರವರೆಗೆ ನಡೆಯಲಿರುವ ಜಿ-7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ವಿದೇಶಾಂಗ ವಕ್ತಾರ ರಣಧೀರ್ ಜೈಸ್ವಾಲ್, ಶೃಂಗಸಭೆಯಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೆನಡಾ ಪ್ರಧಾನಿ ಮಾರ್ಕ್ ಕಾರ್ನೆ ದೂರವಾಣಿ ಮೂಲಕ ಕಳೆದ ವಾರ ಆಹ್ವಾನ ನೀಡಿದ್ದು, ಆಮಂತ್ರಣವನ್ನು ಅಂಗೀಕರಿಸಲಾಗಿದೆ ಎಂದರು.
ದೂರವಾಣಿ ಮಾತುಕತೆಯ ವೇಳೆ ಭಾರತ-ಕೆನಡಾ ದ್ವಿಪಕ್ಷೀಯ ಬಾಂಧವ್ಯ ಬಲವರ್ಧನೆ ಕುರಿತು ಸಹ ಚರ್ಚಿಸಲಾಗಿದೆ ಎಂದು ಅವರು ತಿಳಿಸಿದರು.