ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಇಂದು ರಾಜಸ್ಥಾನದ ಬಿಕನೇರ್ ವಾಯುನೆಲೆಗೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನದಿಂದ ಕೇವಲ 150 ಕಿ.ಮೀ ದೂರದಲ್ಲಿರುವ ನಾಲ್ ವಾಯುನೆಲೆಗೆ ಕೂಡ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ.
ಅಮೃತ ಭಾರತ ನಿಲ್ದಾಣ ಯೋಜನೆಯಡಿಯಲ್ಲಿ ಪುನರಾಭಿವೃದ್ಧಿ ಮಾಡಲಾದ ದೇಶ್ನೋಕ್ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಬಳಿಕ 26,000 ಕೋಟಿ ರೂ.ಗೂ ಅಧಿಕ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿ, ಬಳಿಕ ದೇಶ್ನೋಕ್‌ನಲ್ಲಿರುವ ಕರ್ಣಿ ಮಾತಾ ದೇವಾಲಯದಲ್ಲಿ ದರ್ಶನ ಪಡೆಯಲಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.