ಪ್ರಧಾನಿ ನರೇಂದ್ರ ಮೋದಿ ಇನ್ನೂ 10 ವರ್ಷ ಕಾಲ ದೇಶವನ್ನು ಆಳುತ್ತಾರೆ: ದೇವೇಂದ್ರ ಫಡ್ನವಿಸ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರು ಇನ್ನೂ 10 ವರ್ಷಗಳ ಕಾಲ ದೇಶವನ್ನು ಆಳುತ್ತಾರೆ ಎಂದು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್ ಭರವಸೆ ವ್ಯಕ್ತಪಡಿಸಿದರು. ಮಂಗಳೂರಿನ ಸಮಾರಂಭದಲ್ಲಿ ಮಾತನಾಡಿದ ಅವರು. ಮೋದಿಯವರು 2024 ರಿಂದ 2029 ರವರೆಗೆ ದೇಶವನ್ನು ಮುನ್ನಡೆಸುತ್ತಾರೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರ ದೇಶ ವಿರೋಧಿ ಜನರನ್ನು ಬೆಂಬಲಿಸುತ್ತಿದೆ. ಪಾಕಿಸ್ತಾನದ ಪರ ಘೋಷಣೆಗಳನ್ನು ಹರಡುವ ಜನರನ್ನು ಯಾವ ರೀತಿಯ ಸರ್ಕಾರ ಬೆಂಬಲಿಸುತ್ತದೆ? ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ದೇಶವಿರೋಧಿ ಶಕ್ತಿಗಳು ಬಲಗೊಂಡಿವೆ. ಯಾವುದೇ ದೇಶ ವಿರೋಧಿ ಘಟನೆಗಳನ್ನು ಆಯಾ ಸರ್ಕಾರಗಳು ಖಂಡಿಸಬೇಕು ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!