ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರಧಾನಿ ಮೋದಿ ಇಂದಿನಿಂದ ರಷ್ಯಾ ಪ್ರವಾಸ ಕೈಗೊಂಡಿದ್ದಾರೆ. ಉಕ್ರೇನ್​, ರಷ್ಯಾ ಯುದ್ಧ ಆರಂಭವಾದ ಬಳಿಕ ಇದೇ ಮೊದಲ ಭೇಟಿಯಾಗಿದೆ.

ಸೋಮವಾರ, ಮಂಗಳವಾರ ರಷ್ಯಾದಲ್ಲಿ ಹಲವು ಸುತ್ತಿನ ಮಾತುಕತೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬುಧವಾರ ಆಸ್ಟ್ರಿಯಾಕ್ಕೆ ತೆರಳಲಿರುವ ಪ್ರಧಾನಿ, ಗುರುವಾರದವರೆಗೂ ಅಲ್ಲಿರಲಿದ್ದಾರೆ. 46 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಆಸ್ಟ್ರಿಯಾ ಪ್ರವಾಸ ಕೈಗೊಳ್ಳುತ್ತಿರುವುದು ಇದೇ ಮೊದಲಾಗಿದೆ.

ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯು ಮೋದಿಯವರ ರಷ್ಯಾ ಭೇಟಿಯ ಪ್ರಮುಖ ಅಜೆಂಡಾವಾಗಿದೆ. ರಷ್ಯಾ-ಉಕ್ರೇನ್ ಸಂಘರ್ಷದ ನಂತರದ ಮೊದಲ ಭೇಟಿಯಲ್ಲಿ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಈ ವಿಷಯದ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ನರೇಂದ್ರ ಮೋದಿ ಅವರಿಗೆ ಔತಣಕೂಟ ಏರ್ಪಡಿಸಲಿದ್ದಾರೆ. ನಾಳೆ ಶೃಂಗಸಭೆ ನಡೆಯಲಿದ್ದು, ಇದರಲ್ಲಿ ಉಭಯ ನಾಯಕರು ಭಾಗವಹಿಸಲಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!