ಹೊಸದಿಗಂತ ಡಿಜಿಟಲ್ ಡೆಸ್ಕ್:
6 ವರ್ಷದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾಗೆ ಭೇಟಿ ನೀಡಲಿದ್ದಾರೆ. ಈ ತಿಂಗಳು ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಗಾಗಿ ಮೋದಿ ಚೀನಾ ಪ್ರವಾಸ ಕೈಗೊಳ್ಳಲಿದ್ದಾರೆ.
2020 ರಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಗಲ್ವಾನ್ ಘರ್ಷಣೆಯ ನಂತ ಮೊದಲ ಚೀನಾ ಪ್ರವಾಸ ಇದಾಗಿದೆ. ಆಗಸ್ಟ್ 30, ಸೆಪ್ಟೆಂಬರ್ 1 ರಂದು ಶಾಂಘೈ ಸಹಕಾರ ಸಂಸ್ಥೆಯ ಸಭೆ ಆಯೋಜನೆಗೊಂಡಿದೆ.
ಪ್ರಧಾನಿ ಮೋದಿ ಎರಡು ದಿನಗಳ ಭೇಟಿಗಾಗಿ ಚೀನಾಕ್ಕೆ ತೆರಳುವ ಮೊದಲು ಆಗಸ್ಟ್ 30 ರಂದು ಜಪಾನ್‌ಗೆ ಭೇಟಿ ನೀಡಲಿದ್ದಾರೆ.