74ನೇ ಗಣರಾಜ್ಯೋತ್ಸಕ್ಕೆ ದೇಶದ ಜನತೆಗೆ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ..

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತದ 74ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ದೇಶದ ಜನತೆಗೆ ಶುಭಾಶಯ ತಿಳಿಸಿದ್ದಾರೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ದೇಶವು ಗಣರಾಜ್ಯೋತ್ಸವ ಆಚರಿಸುತ್ತಿರುವ ಕಾರಣ ಈ ಸಂದರ್ಭ ಅತ್ಯಂತ ವಿಶೇಷವಾಗಿದೆ ಎಂದರು.

“ದೇಶದ ಜನರಿಗೆ ಗಣರಾಜ್ಯೋತ್ಸವದ ಶುಭಾಶಯಗಳು. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಾವು ಇದನ್ನು ಆಚರಿಸುತ್ತಿರುವುದು ಈ ಬಾರಿಯ ವಿಶೇಷವಾಗಿದೆ. ದೇಶದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ನಾವು ಒಗ್ಗಟ್ಟಿನಿಂದ ಮುನ್ನಡೆಯಲು ಬಯಸುತ್ತೇವೆ. ಎಲ್ಲಾ ಭಾರತೀಯರಿಗೆ ಗಣರಾಜ್ಯೋತ್ಸವದ ಶುಭಾಶಯಗಳು!” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!