ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ದೇಶದ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದ್ದು, ಹಬ್ಬವು ಎಲ್ಲರಿಗೂ ಸಂತೋಷ, ಸಮೃದ್ಧಿ ಮತ್ತು ಉತ್ತಮ ಆರೋಗ್ಯವನ್ನು ತರಲಿ ಎಂದು ಹಾರೈಸಿದ್ದಾರೆ.
“ಎಲ್ಲರಿಗೂ ದೀಪಾವಳಿಯ ಶುಭಾಶಯಗಳು! ಈ ವಿಶೇಷ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಅದ್ಭುತ ಆರೋಗ್ಯವನ್ನು ತರಲಿ” ಎಂದು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಭಾರತದಾದ್ಯಂತ ಹೆಸರಾಂತ ಸೆಲೆಬ್ರಿಟಿಗಳು ಮತ್ತು ಪ್ರಭಾವಿಗಳು ಪ್ರಧಾನಮಂತ್ರಿಯವರ #VocalForLocal ಕರೆಗೆ ದನಿಗೂಡಿಸಿದರು. ಸ್ಥಳೀಯ ಮಾರಾಟಗಾರರು ಮತ್ತು ತಯಾರಕರನ್ನು ಪ್ರೋತ್ಸಾಹಿಸಲು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಬೆಂಬಲಿಸಿದರು.
ಪ್ರಧಾನಿ ಮೋದಿಯವರ ಈ ಕರೆಯು ಸರ್ಕಾರದ ಯೋಜನೆಗಳ ಆಳವಾದ ಪ್ರಭಾವಕ್ಕೆ ಸಾಕ್ಷಿಯಾಗಿದೆ. ದೀಪಾವಳಿ ಉತ್ಸಾಹವನ್ನು ಹೆಚ್ಚಿಸಿರುವುದಲ್ಲದೆ..ಸ್ಥಳೀಯ ಉದ್ಯಮಿಗಳು, ಕುಶಲಕರ್ಮಿಗಳು ಮತ್ತು ಒಟ್ಟಾರೆ ಆರ್ಥಿಕತೆಗೆ ಸರ್ಕಾರದ ಬದ್ಧತೆಯನ್ನು ದೃಢೀಕರಿಸುತ್ತದೆ.