ಓಣಂ ಹಬ್ಬಕ್ಕೆ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಓಣಂ ಹಬ್ಬದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯ ತಿಳಿಸಿದ್ದಾರೆ.

ಈ ಕುರಿತು ಟ್ವಿಟ್ಟರ್‌ನಲ್ಲಿ ಟ್ವೀಟ್‌ ಮಾಡಿರುವ ಅವರು, ʼಎಲ್ಲರಿಗೂ ಓಣಂ ಹಬ್ಬದ ಶುಭಾಶಯಗಳು. ಈ ಶುಭದಿನದಂದು ನಿಮ್ಮ ಜೀವನವು ಉತ್ತಮ ಆರೋಗ್ಯ, ಸಂತೋಷ ಮತ್ತು ಸಮೃದ್ಧಿಯಿಂದ ಕೂಡಿರಲಿ ಎಂದು ಹಾರೈಸುತ್ತೇನೆ. ಕಳೆದ ಹಲವು ವರ್ಷಗಳಿಂದ ಓಣಂ ಜಾಗತಿಕ ಹಬ್ಬವಾಗಿದ್ದು, ಇದು ಕೇರಳದ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆʼ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಓಣಂ ಹಬ್ಬವು ಕೇರಳದ ಶ್ರೀಮಂತ ಪರಂಪರೆ ಮತ್ತು ಸಾಂಸ್ಕೃತಿಕ ವೈಭವದ ಸಂಕೇತವಾಗಿದೆ. ಈ ಹಬ್ಬವನ್ನು ಅತ್ಯಂತ ಸಡಗರದಿಂದ ಆಚರಿಸಲಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!