ಜನವರಿ 13 ರಂದು ಆರ್ಥಿಕ ತಜ್ಞರೊಂದಿಗೆ ಪ್ರಧಾನಿ ಮೋದಿ ಪ್ರಮುಖ ಸಭೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಸಂಸತ್ತಿನಲ್ಲಿ 2023-24ನೇ ಹಣಕಾಸು ವರ್ಷಕ್ಕೆ ಬಜೆಟ್ ಮಂಡಿಸಲಿದ್ದಾರೆ. ಎರಡನೇ ಬಾರಿಗೆ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರದ ಸಂಪೂರ್ಣ ಬಜೆಟ್ ಇದಾಗಿದೆ. ಮುಂದಿನ ವರ್ಷ ನಡೆಯಲಿರುವ ಸಂಸತ್ ಚುನಾವಣೆಯ ಹಿನ್ನೆಲೆಯಲ್ಲಿ ಸಮಾಜದ ಎಲ್ಲ ವರ್ಗದ ಜನರಿಗೆ ದೊಡ್ಡ ಮಟ್ಟದ ಈ ಬಾರಿಯ ಬಜೆಟ್‌ ಮಂಡಿಸಲು ಬಿಜೆಪಿ ಸರಕಾರ ಶ್ರಮಿಸುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಸಂಸತ್ತಿನಲ್ಲಿ ಬಜೆಟ್ ಸಭೆಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇದೇ 13ರಂದು ಮಹತ್ವದ ಸಭೆ ನಡೆಸಲಿದ್ದಾರೆ.

ಮುಂದಿನ ಶುಕ್ರವಾರ, ಪ್ರಧಾನಿ ನರೇಂದ್ರ ಮೋದಿ ಅವರು ಅರ್ಥಶಾಸ್ತ್ರಜ್ಞರು, ನೀತಿ ಆಯೋಗದ ತಂಡ ಮತ್ತು ವಿವಿಧ ಕ್ಷೇತ್ರಗಳ ತಜ್ಞರೊಂದಿಗೆ ಸಭೆ ನಡೆಸಲಿದ್ದಾರೆ. ಹಲವು ಕೇಂದ್ರ ಸಚಿವರು ಕೂಡ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮುಖವಾಗಿ ಭಾರತದ ಆರ್ಥಿಕತೆಯ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ. ಭಾರತದ ಜಿಡಿಪಿ ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮೋದಿ ಅವರು ಈ ಸಭೆಯಲ್ಲಿ ಅರ್ಥಶಾಸ್ತ್ರಜ್ಞರಿಂದ ಸಲಹೆ ಮತ್ತು ಸೂಚನೆಗಳನ್ನು ಪಡೆಯಲಿದ್ದಾರೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.

ಪ್ರಸಕ್ತ ವರ್ಷದಲ್ಲಿ ಭಾರತದ ಜಿಡಿಪಿ ಶೇ.7 ಆಗುವ ನಿರೀಕ್ಷೆ ಇದೆ. ಕಳೆದ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆಯು ಶೇಕಡಾ 8.5 ರಷ್ಟಿದೆ ಎಂದು ಸರ್ಕಾರ ಅಂದಾಜಿಸಿತ್ತು ಮತ್ತೊಂದೆಡೆ 2024ರಲ್ಲಿ ನಡೆಯಲಿರುವ ಸಂಸತ್ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಬಜೆಟ್ ಮಂಡಿಸುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!