ಪ್ರಧಾನಿ ನರೇಂದ್ರ ಮೋದಿಯ ಆಡಳಿತ ಅಮೃತ ಕಾಲವಲ್ಲ, ವಿನಾಶ ಕಾಲ: ಸಿಎಂ ವ್ಯಂಗ್ಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಹತ್ತು ವರ್ಷಗಳ ಬಿಜೆಪಿ ಆಡಳಿತವನ್ನು ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರು ‘ಅಮೃತ ಕಾಲ’ ಎಂದು ಬಣ್ಣಿಸುತ್ತಿದ್ದು, ಇದೀಗ ಈ ವಿಚಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರು ಬಿಜೆಪಿ ಆಡಳಿತವನ್ನು ‘ಅಮೃತ ಕಾಲ’ ಎಂದು ಬಣ್ಣಿಸುತ್ತಿದ್ದಾರೆ. ವಾಸ್ತವದಲ್ಲಿ ಇದು ಭಾರತದ ವಿನಾಶ ಕಾಲ. ಬಿಜೆಪಿಯ ಆಡಳಿತಾವಧಿಯಲ್ಲಿ ದೇಶದ ರೈತರು, ಕಾರ್ಮಿಕರು, ಮಹಿಳೆಯರು, ಯುವಜನರು, ಶೋಷಿತರು ಮತ್ತು ಜನಸಾಮಾನ್ಯರು ಎದುರಿಸುತ್ತಿರುವ ಕಷ್ಟಗಳು ಐದರಿಂದ ಹತ್ತು ಪಟ್ಟು ಹೆಚ್ಚಾಗಿದೆ ಎಂದು ಟೀಕಿಸಿದ್ದಾರೆ.

10 ವರ್ಷಗಳ ಹಿಂದೆ ಪ್ರಧಾನಿ ಮೋದಿ ಅವರು ಈ ದೇಶದ ಮತದಾರರಿಗೆ ನೀಡಿದ್ದ ಒಂದೇ ಒಂದು ಭರವಸೆ ಪೂರ್ಣ ಪ್ರಮಾಣದಲ್ಲಿ ನೀಡಿಲ್ಲ. ರೈತರ ಆದಾಯದ ದುಪ್ಪಟ್ಟು, ಯುವಜನರಿಗೆ ವಾರ್ಷಿಕ 2 ಕೋಟಿ ಉದ್ಯೋಗ, ಮಹಿಳೆಯರಿಗೆ ರಕ್ಷಣೆ, ಕಾರ್ಮಿಕರಿಗೆ ಉದ್ಯೋಗ ಭದ್ರತೆ, ಶೋಷಿತ ಸಮುದಾಯಗಳಿಗೆ ರಕ್ಷಣೆ, ಅಗ್ಗದ ದರದಲ್ಲಿ ಅಗತ್ಯ ವಸ್ತುಗಳ ಪೂರೈಕೆ ಮೊದಲಾದ ಭರವಸೆಗಳ ನೀಡಿ ಮೋದಿ ಅವರು ಚುನಾವಣೆಯಲ್ಲಿ ಗೆದ್ದಿದ್ದರು. ಜಯಗಳಿಸಿದ ನಂತರ ಜನರಿಗೆ ನೀಡಿದ್ದ ಭರವಸೆಗಳನ್ನು ಮರೆತು ದೇವರು-ಧರ್ಮದ ಹೆಸರಿನ ಭಾವನಾತ್ಮಕ ರಾಜಕಾರಣ, ಉದ್ಯಮಿಗಳ ತುಷ್ಟೀಕರಣದಲ್ಲಿ ಕಳೆದು ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!