ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆಯಲ್ಲಿ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿಲುವಳಿ ಮೇಲಿನ ಚರ್ಚೆ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ನೀಡಲಿದ್ದಾರೆ.
ವಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಕುರಿತಾದ ಎರಡು ದಿನಗಳ ಚರ್ಚೆಯಲ್ಲಿ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಚಿವೆ ಸ್ಮೃತಿ ಇರಾನಿ ಸೇರಿದಂತೆ ಹಲವರ ಮಧ್ಯೆ ವಾಗ್ವಾದ ನಡೆದಿತ್ತು. ಪ್ರಧಾನಿ ಸದನದಲ್ಲಿ ಹಾಜರಾಗಿ ಅವಿಶ್ವಾಸ ನಿರ್ಣಯದ ವಿರುದ್ಧ ಮಾತನಾಡಲಿದ್ದಾರೆ ಎಂದು ಕೇಂದ್ರ ಸಚಿವರು ಲೋಕಸಭೆಗೆ ಬುಧವಾರ ತಿಳಿಸಿದ್ದರು.
ಇಂದಿನ ಚರ್ಚೆಯಲ್ಲಿ ಪ್ರಧಾನಿ ಮೋದಿ ಅವರೇ ನೇರವಾಗಿ ಉತ್ತರ ನೀಡಲಿದ್ದು, ಬಳಿಕ ಅವಿಶ್ವಾಸ ನಿಲುವಳಿಯನ್ನು ಮತಕ್ಕೆ ಹಾಕಲಾಗುತ್ತದೆ.