ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ 77ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಾಚರಣೆ ಮನೆಮಾಡಿದೆ. ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಧ್ವಜಾರೋಹಣ ನೆರವೇರಿಸಿಲಿದ್ದಾರೆ.
ಅದಕ್ಕೂ ಮುನ್ನ ರಾಜಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಸಮಾಧಿಗೆ ತೆರಳಿ ದರುಶನ ಪಡೆದರು. ಬಳಿಕ ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು. ಇಲ್ಲಿಂದ ನೇರವಾಗಿ ಕೆಂಪುಕೋಟೆಗೆ ತೆರಳಿದರು.