Wednesday, June 29, 2022

Latest Posts

ವಾರಣಾಸಿಯಲ್ಲಿ ನಾಳೆ ಅಖಿಲ ಭಾರತ ಮೇಯರ್‌ಗಳ ಸಮ್ಮೇಳನಕ್ಕೆ ಪ್ರಧಾನಿಯಿಂದ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್

ಹೊಸದಿಲ್ಲಿ: ಉತ್ತರ ಪ್ರದೇಶದ ನಗರಾಭಿವೃದ್ಧಿ ಇಲಾಖೆಯು ವಾರಣಾಸಿಯಲ್ಲಿ ಆಯೋಜಿಸಿರುವ ಅಖಿಲ ಭಾರತ ಮೇಯರ್‌ಗಳ ಸಮ್ಮೇಳನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ (ಡಿ. 17ರಂದು) ಬೆಳಗ್ಗೆ 10.30ಕ್ಕೆ ಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿ, ಮಾತನಾಡಲಿದ್ದಾರೆ. ದೇಶದ ವಿವಿಧ ರಾಜ್ಯಗಳ ಮೇಯರ್‌ಗಳು ನವ ನಗರ ಭಾರತ ವಿಷಯದಲ್ಲಿ ನಡೆಯುವ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

ನಾಗರಿಕರು ನಗರ ಪ್ರದೇಶಗಳಲ್ಲಿ ವಾಸಿಸಲು ಅನುಕೂಲವಾಗುವಂತೆ ನೋಡಿಕೊಳ್ಳುವುದು ಪ್ರಧಾನ ಮಂತ್ರಿಯವರ ನಿರಂತರ ಪ್ರಯತ್ನವಾಗಿದೆ. ಶಿಥಿಲಗೊಂಡಿರುವ ನಗರ ಮೂಲಸೌಕರ್ಯ ಮತ್ತು ಸೌಕರ್ಯಗಳ ಕೊರತೆಯ ಸಮಸ್ಯೆಗಳನ್ನು ಪರಿಹರಿಸಲು ಸರಕಾರವು ಅನೇಕ ಯೋಜನೆಗಳು ಮತ್ತು ಉಪಕ್ರಮಗಳನ್ನು ಪ್ರಾರಂಭಿಸಿದೆ.

ನಗರಾಭಿವೃದ್ಧಿ ಕ್ಷೇತ್ರದಲ್ಲಿ ಭಾರತ ಸರಕಾರ ಮತ್ತು ಉತ್ತರ ಪ್ರದೇಶ ಸರಕಾರದ ಪ್ರಮುಖ ಸಾಧನೆಗಳನ್ನು ಪ್ರದರ್ಶಿಸಲು ಡಿ. 17ರಿಂದ 19ರವರೆಗೆ ಪ್ರದರ್ಶನವನ್ನು ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಮತ್ತು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವರು ಭಾಗವಹಿಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss