ಇಂದು ಪ್ರಧಾನಿ ಮೋದಿಯಿಂದ 11 ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಪ್ರಧಾನಿ ಮೋದಿ ತಮಿಳುನಾಡಿನಲ್ಲಿ 11 ಹೊಸ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಮತ್ತು ಸೆಂಟ್ರಲ್ ಇನ್ ಸ್ಟಿಟ್ಯೂಟ್ ಆಫ್ ಕ್ಲಾಸಿಕಲ್ ತಮಿಳಿನ ಹೊಸ ಕ್ಯಾಂಪಸ್ ಅನ್ನು ಉದ್ಘಾಟಿಸಲಿದ್ದಾರೆ.
ಇಂದು ಸಂಜೆ 4 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮ ನಡೆಯಲಿದೆ. ಈ ಬಗ್ಗೆ ಪ್ರಧಾನಿ ಕಚೇರಿ ಮಾಹಿತಿ ನೀಡಿದ್ದು, ತಮಿಳುನಾಡಿನ ಸಂಸ್ಕೃತಿ ಜಾಗತಿಕವಾಗಿ ಮೆಚ್ಚುಗೆ ಪಡೆದಿದೆ. ಅಂಥಹ ಸಂಸ್ಕೃತಿಯನ್ನು ಉಳಿಸಿ, ಆಚರಿಸಲು ನಮ್ಮ ಪ್ರಯತ್ನ ನಿರಂತರವಾಗಿ ಸಾಗುತ್ತಿರುತ್ತದೆ. ಅದರ ಒಂದು ಭಾಗವಾಗಿ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಕ್ಲಾಸಿಕಲ್ ತಮಿಳಿನ ಹೊಸ ಕ್ಯಾಂಪಸ್ ಉದ್ಘಾಟನೆಯಾಗುತ್ತಿದೆ ಎಂದು ತಿಳಿಸಿದೆ.
ತಮಿಳುನಾಡಿನ ವಿರುದುನಗರ, ನಾಮಕ್ಕಲ್, ದಿ ನೀಲಗಿರಿ, ತಿರುಪ್ಪೂರ್, ತಿರುವಳ್ಳೂರು, ನಾಗಪಟ್ಟಣಂ, ದಿಂಡಿಗಲ್, ಕಲ್ಲಕುರಿಚಿ, ಅರಿಯಲೂರ್, ರಾಮನಾಥಪುರಂ ಮತ್ತು ಕೃಷ್ಣಗಿರಿ ಜಿಲ್ಲೆಗಳಲ್ಲಿ ಉದ್ಘಾಟನೆಯಾಗುತ್ತಿರುವ 11 ವೈದ್ಯಕೀಯ ಕಾಲೇಜುಗಳಿಗೆ ಸುಮಾರು 4 ಸಾವಿರ ಕೋಟಿ ರೂ. ವೆಚ್ಚವಾಗಲಿದೆ. ಈ ಪೈಕಿ 2145 ಕೋಟಿ ರೂ.ವನ್ನು ಕೇಂದ್ರ ಸರ್ಕಾರ ಒದಗಿಸಿದೆ.
ಈ ಕಾಲೇಜುಗಳು ಕೇಂದ್ರದ ಅಸ್ತಿತ್ವದಲ್ಲಿರುವ ಜಿಲ್ಲೆ/ರೆಫರಲ್ ಆಸ್ಪತ್ರೆಯೊಂದಿಗೆ ಸಂಪರ್ಕಿಸಲಾದ ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆ ಎಂಬ ಯೋಜನೆ ಅಡಿಯಲ್ಲಿ ಸ್ಥಾಪಿಸಲಾಗುತ್ತಿದೆ. ಇಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲಾ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತದೆ.
ಇದರ ಜತಗೆ ಇಂದು ಪುದುಚೆರಿಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿಯ ಪ್ರಯುಕ್ತ 122 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ತಂತ್ರಜ್ಞಾನ ಹಾಗೂ 23 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಸಭಾಂಗಣವನ್ನು ಉದ್ಘಾಟಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!