ರಾಜ್ಯ ಚುನಾವಣಾ ಅಖಾಡಕ್ಕೆ ಪ್ರಧಾನಿ: ಏ.27 ರಂದು ಮೋದಿ ಆಗಮನ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜ್ಯದಲ್ಲಿ ಚುನಾವಣಾ ಅಖಾಡ ರಂಗೇರಿದೆ.
ಈಗಾಗಲೇ ಕಾಂಗ್ರೆಸ್ , ಬಿಜೆಪಿ ತಮ್ಮ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದೂ, ಅದ್ರ ಬೆನ್ನಲ್ಲೇ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಮತ್ತೆ ರಾಜ್ಯಕ್ಕೆ ಬರಲಿದ್ದಾರೆ.
ಏಪ್ರಿಲ್ 27ರಂದು ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಮಾವೇಶದ ಸ್ಥಳ ಇನ್ನೂ ನಿಗದಿಯಾಗಿಲ್ಲ ಎನ್ನಲಾಗಿದೆ.
ಇನ್ನೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಮಧ್ಯಾಹ್ನ ಬೆಂಗಳೂರಿಗೆ ಬರಲಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ವಿಜಯಪುರದಲ್ಲಿ ರೋಡ್ ಶೋ ಮೂಲಕ ಪ್ರಚಾರ ನಡೆಸಲಿದ್ದಾರೆ. ಶುಕ್ರವಾರ ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ತಂಗಲಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!