ಧ್ಯಾನದ ನಡುವೆಯೂ ಕರ್ತವ್ಯ ಮೆರೆದ ಪ್ರಧಾನಿ: ಈಶಾನ್ಯ ರಾಜ್ಯಗಳ ಪರಿಸ್ಥಿತಿ ಅವಲೋಕಿಸಿದ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈಶಾನ್ಯ ರಾಜ್ಯಗಳಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿದ್ದು, ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪರಿಸ್ಥಿತಿಯನ್ನು ಅವಲೋಕನ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಬರೆದುಕೊಂಡಿರುವ ಪ್ರಧಾನಿ ಮೋದಿ, ‘ದುರದೃಷ್ಟವಶಾತ್ ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ತ್ರಿಪುರಾ ಮತ್ತು ಪಶ್ಚಿಮ ಬಂಗಾಳದಲ್ಲಿ ರೀಮಲ್ ಚಂಡಮಾರುತದ ನೈಸರ್ಗಿಕ ವಿಕೋಪ ಸಂಭವಿಸಿದೆ. ಸಂಕಷ್ಟ ಎದುರಿಸುತ್ತಿರುವ ಜನರೊಂದಿಗೆ ನಮ್ಮ ಪ್ರಾರ್ಥನೆಯಿದೆ’ ಎಂದು ಹೇಳಿದ್ದಾರೆ.

‘ಈಗಿನ ಪರಿಸ್ಥಿತಿಯನ್ನು ಅವಲೋಕಿಸಿದ್ದೇನೆ. ಈಶಾನ್ಯ ರಾಜ್ಯಗಳಿಗೆ ಬೇಕಾದ ಎಲ್ಲ ಸಹಾಯವನ್ನು ಕೇಂದ್ರ ಸರ್ಕಾರ ನೀಡುವುದಾಗಿ ಭರವಸೆ ನೀಡಿದ್ದೇನೆ. ಅಲ್ಲದೆ ಪರಿಸ್ಥಿತಿಯನ್ನು ನಿರಂತರವಾಗಿ ಅವಲೋಕನ ಮಾಡುತ್ತಿದ್ದೇವೆ. ತೊಂದರೆಯಲ್ಲಿರುವವರಿಗೆ ಸಹಾಯ ಮಾಡಲು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.

https://x.com/narendramodi/status/1796506393475940577?ref_src=twsrc%5Etfw%7Ctwcamp%5Etweetembed%7Ctwterm%5E1796506393475940577%7Ctwgr%5E4606d58598d20759f5a532fa5260daa3fe493437%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada%2Fkannadanewsnow-epaper-kanowcom%2Fhomee-updates-homee%3Fmode%3Dpwaaction%3Dclick

ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹ ಪರಿಸ್ಥಿತಿಯನ್ನು ಅವಲೋಕಿಸಿರುವುದಾಗಿ ಹೇಳಿದ್ದಾರೆ. ಅಲ್ಲದೆ ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಜತೆ ಸಮಾಲೋಚನೆ ನಡೆಸಿರುವುದಾಗಿ ತಿಳಿಸಿದ್ದಾರೆ.

ಪ್ರಸುತ್ತ ಕನ್ಯಾಕುಮಾರಿಗೆ ಭೇಟಿಯಲ್ಲಿರುವ ಪ್ರಧಾನಿ ಮೋದಿ, ಎರಡು ದಿನಗಳ ಧ್ಯಾನದಲ್ಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!