ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಮಕೂರಿನಲ್ಲಿ ಇಂದು ಮುಂಜಾನೆ ನಡೆದ ರಸ್ತೆ ಅಪಘಾತಕ್ಕೆ ಪ್ರಧಾನಿ ನರೇಂದ್ರ ಮೋದಿ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ʻಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ನಡೆದ ಅಪಘಾತ ಹೃದಯ ವಿದ್ರಾವಕ. ಅಪಘಾತದಲ್ಲಿ ಜೀವ ಕಳೆದು ಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದುʼ ಎಂದು ಘೋಷಣೆ ಮಾಡಿದರು.
ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ನಡೆದ ಅಪಘಾತ ಹೃದಯ ವಿದ್ರಾವಕ.ಅಪಘಾತದಲ್ಲಿ ಜೀವ ಕಳೆದು ಕೊಂಡವರಿಗೆ ಸಂತಾಪಗಳು.ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥನೆ.ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು: PM
— PMO India (@PMOIndia) August 25, 2022
ಇಂದು ಮುಂಜಾನೆ ತುಮಕೂರು-ಶಿರಾ ರಾಷ್ಟ್ರೀಯ ಹೆದ್ದಾರಿಯ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೇನಹಳ್ಳಿ ಗೇಟ್ ಬಳಿ ಲಾರಿ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತವಾಗಿತ್ತು. ದುರಂತದಲ್ಲಿ ಒಂಭತ್ತು ಮಂದಿ ಸಾವನ್ನಪ್ಪಿದ್ದು, 15ಜನ ಗಂಭೀರ ಗಾಯಗೊಂಡಿದ್ದರು. ಪ್ರಸ್ತುತ ಗಾಯಾಳುಗಳಿಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.