ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್ ಉಗ್ರ ದಾಳಿ ಬಳಿಕ ಪ್ರಧಾನಿ ನರೇಂದ್ರ ಮೋಡಿ ಇದೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ.
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಬ್ರಿಡ್ಜ್ ಉದ್ಘಾಟಿಸಲಿದ್ದಾರೆ. ಒಟ್ಟು 46 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಪ್ರಧಾನಿ ಮೋದಿ ರಾಷ್ಟ್ರಕ್ಕೆ ಅರ್ಪಿಸಲಿದ್ದಾರೆ. ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಮತ್ತು ಚೆನಾಬ್ ನದಿಯ ಮೇಲೆ ನಿರ್ಮಿಸಲಾದ ದೇಶದ ಮೊದಲ ಕೇಬಲ್-ಸ್ಟೇಡ್ ಸೇತುವೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.
ಪ್ರಧಾನಿ ಬೆಳಗ್ಗೆ 11 ಗಂಟೆಗೆ ಚೆನಾಬ್ ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಈ ಸೇತುವೆ ಐಫೆಲ್ ಟವರ್ಗಿಂತ ಎತ್ತರವಾಗಿದ್ದು, ಭಾರತದ ಎಂಜಿನಿಯರಿಂಗ್ ಕೌಶಲ್ಯದ ಸಂಕೇತವೆಂದು ಪರಿಗಣಿಸಲಾಗಿದೆ. ಇದನ್ನು ನಿರ್ಮಿಸಲು ಸುಮಾರು 1500 ಕೋಟಿ ರೂ. ವೆಚ್ಚವಾಗಿದೆ. ಇದರ ನಂತರ, ಅವರು ದೇಶದ ಮೊದಲ ಕೇಬಲ್-ಸ್ಟೇ ರೈಲು ಸೇತುವೆಯಾದ ಅಂಜಿ ರೈಲು ಸೇತುವೆಯನ್ನು ಉದ್ಘಾಟಿಸಲಿದ್ದಾರೆ.
ಮಧ್ಯಾಹ್ನ 12 ಗಂಟೆ ಸುಮಾರಿಗೆ, ಪ್ರಧಾನಿ ಮೋದಿ ಅವರು ಕತ್ರಾದಿಂದ ಶ್ರೀನಗರಕ್ಕೆ ಎರಡು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ.