ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಮಂತ್ರಿ ನರೇಂದ್ರ ಮೋದಿ ಜು.2 ರಿಂದ 9ರವರೆಗೆ ವಿದೇಶ ಪ್ರವಾಸಕ್ಕೆ ತೆರಳಲಿದ್ದು, ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾ ದೇಶಗಳಿಗೆ ಭೇಟಿ ನೀಡಲಿದ್ದಾರೆ.
ಗ್ಲೋಬಲ್ ಸೌತ್ ರಾಷ್ಟ್ರಗಳೊಂದಿಗೆ ಭಾರತದ ಸಂಬಂಧವನ್ನು ಬಲಪಡಿಸುವುದು ಈ ಭೇಟಿಯ ಮುಖ್ಯ ಉದ್ದೇಶವಾಗಿದೆ.`ಆಪರೇಷನ್ ಸಿಂಧೂರ’ ಮೂಲಕ ಭಯೋತ್ಪಾದನೆಯ ವಿರುದ್ಧ ಭಾರತದ ನಿಲುವನ್ನು ಜಾಗತಿಕವಾಗಿ ಮಂಡಿಸುವುದು ಮತ್ತು ರಾಜತಾಂತ್ರಿಕ ಸಹಕಾರವನ್ನು ಉತ್ತೇಜಿಸುವುದಾಗಿದೆ. ಈ ಭೇಟಿಯು ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸುವುದರ ಜೊತೆಗೆ ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸುವ ಗುರಿಯನ್ನು ಹೊಂದಿದೆ.