ಹೊಸದಿಗಂತ ಡಿಜಿಟಲ್ ಡೆಸ್ಕ್ :
ʼಮನ್ ಕಿ ಬಾತ್ʼ ಮಾಸಿಕ ರೇಡಿಯೋ ಕಾರ್ಯಕ್ರಮದ 99ನೇ ಸಂಚಿಕೆಯು ಇಂದು
ಬೆಳಗ್ಗೆ 11 ಗಂಟೆಗೆ ಪ್ರಸಾರವಾಗಲಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶ ಮತ್ತು ವಿದೇಶದ ಜನರೊಂದಿಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ.
ಸಾಮಾಜಿಕ ಬದಲಾವಣೆಗಳನ್ನು ತರುವ ಸ್ಪೂರ್ತಿದಾಯಕ ಪ್ರಯತ್ನಗಳ ಕುರಿತು ಮಾತನಾಡಲು ಪ್ರಧಾನಿ ಈ ಹಿಂದೆ ಜನರಿಂದ ಸಲಹೆಗಳನ್ನು ಆಹ್ವಾನಿಸಿದ್ದರು. ಅದರ ಅನ್ವಯ ಇಂದಿನ ಕಾರ್ಯಕ್ರಮದಲ್ಲಿ ಮೋದಿ ಹಲವು ವಿಚಾರಗಳ ಕುರಿತು ಮಾತನಾಡಲಿದ್ದಾರೆ.
ಕಾರ್ಯಕ್ರಮವನ್ನು ಆಲ್ ಇಂಡಿಯಾ ರೇಡಿಯೋ ಮತ್ತು ದೂರದರ್ಶನ, AIR ನ್ಯೂಸ್ ವೆಬ್‌ಸೈಟ್ ಮತ್ತು ನ್ಯೂಸ್‌ಏರ್ ಮೊಬೈಲ್ ಅಪ್ಲಿಕೇಶನ್‌ನ ಸಂಪೂರ್ಣ ನೆಟ್‌ವರ್ಕ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ.
ಅಲ್ಲದೆ ಎಐಆರ್ ನ್ಯೂಸ್, ಡಿಡಿ ನ್ಯೂಸ್, ಪಿಎಂಒ, ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಯೂಟ್ಯೂಬ್ ಚಾನೆಲ್‌ಗಳಲ್ಲಿ ಕೂಡ ಲೈವ್-ಸ್ಟ್ರೀಮ್ ಆಗುತ್ತದೆ.