ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಿಇಎಸ್ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಅವಕಾಶ ನೀಡದ ಕಾರಣ ಪ್ರಾಂಶುಪಾಲರಿಗೆ ಜೀವ ಬೆದರಿಕೆ ಹಾಕಿದ್ದ ಆರೋಪದ ಮೇರೆಗೆ 6 ಮಂದಿಯ ವಿರುದ್ದ ಪೊಲೀಸ್ ಪ್ರಕರಣ ದಾಖಲಾಗಿದೆ.
ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿರುವ ಪೀಪಲ್ಸ್ ಎಜುಕೇಶನ್ ಸೊಸೈಟಿಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಕಾಲೇಜಿನ ಪ್ರಾಂಶುಪಾಲರಿಗೆ ಜೀವಬೆದರಿಕೆ ಹಾಕಿದ ಆರೋಪದ ಮೇರೆಗೆ 6 ಮಂದಿಯ ವಿರುದ್ಧ ಪೊಲೀಸರು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸೋಮವಾರ ಪೀಪಲ್ಸ್ ಎಜುಕೇಶನ್ ಸೊಸೈಟಿಯ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಅಭಿಜಿತ್ ವಾಡೇಕರ್ ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಆರೋಪಿಗಳ ವಿರುದ್ಧ ಬಿಎನ್‌ಎಸ್ ಸೆಕ್ಷನ್ 189 (2) (ಕಾನೂನುಬಾಹಿರ ಸಭೆ), 333 (ಅತಿಕ್ರಮಣ), 352 (ಶಾಂತಿ ಭಂಗವನ್ನು ಪ್ರಚೋದಿಸಲು ಉದ್ದೇಶಪೂರ್ವಕ ಅವಮಾನ) ಮತ್ತು 351 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.