ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮರನಾಥ ಯಾತ್ರೆಯಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರವು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಅವರನ್ನು ನೇಮಿಸಿದೆ.
ಅಮರನಾಥ ಯಾತ್ರೆಗೆ ತೆರಳಿದ್ದವರು ಸಂಕಷ್ಟಕ್ಕೆ ಸಿಲುಕಿದ ವಿಚಾರವಾಗಿ ಕರ್ನಾಟಕದ ಯಾತ್ರಾರ್ಥಿಗಳ ಬಗ್ಗೆ ಸಿಎಂ ಮಾಹಿತಿ ಪಡೆದುಕೊಂಡಿದ್ದಾರೆ. ಸಂಪರ್ಕಕ್ಕೆ ಸಿಕ್ಕ ಯಾತ್ರಾರ್ಥಿಗಳು ಸುರಕ್ಷಿತವಾಗಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದು, ಸಂತ್ರಸ್ತರ ರಕ್ಷಣೆ ಹಾಗೂ ರಾಜ್ಯಕ್ಕೆ ಕರೆತರುವ ಬಗ್ಗೆ ಸಿಎಂ ಸೂಚನೆ ನೀಡಿದ್ದಾರೆ. ಅದರ ಅನ್ವಯ ಯಾತ್ರೆಯಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಅವರನ್ನ ಸರ್ಕಾರ ನೇಮಕ ಮಾಡಿದೆ.
ಗದಗ ಜಿಲ್ಲೆಯ 23 ಮಂದಿ ಸೇರಿದಂತೆ ಒಟ್ಟು 80 ಮಂದಿ ಜುಲೈ 4ರಂದು ಅಮರನಾಥ ದರ್ಶನಕ್ಕೆ ತೆರಳಿದ್ದರು. ದರ್ಶನ ಪಡೆದು ಶುಕ್ರವಾರ ವಾಪಸ್ ತೆರಳುವ ವೇಳೆ ಭಾರಿ ಮಳೆಯಿಂದಾಗಿ ಮಾರ್ಗಮಧ್ಯೆ ಗುಡ್ಡ ಕುಸಿತವಾಗಿದೆ. ಬೇಸ್ ಕ್ಯಾಂಪ್ ನಲ್ಲಿ ಆಶ್ರಯ ಪಡೆದು ಯಾತ್ರಾರ್ಥಿಗಳು ಸುರಕ್ಷಿತವಾಗಿದ್ದಾರೆ. ಸದ್ಯ 6 ಯಾತ್ರಾರ್ಥಿಗಳನ್ನು ಹೆಲಿಕಾಪ್ಟರ್ ಮೂಲಕ ಏರ್ ಲಿಫ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.