ಹೊಸದಿಗಂತ ವರದಿ ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯ ರೈತರಿಗೆ ವೈಯಕ್ತಿಕವಾಗಿ ಲಾಭ ನೀಡುವ ಯಾವುದೇ ಗ್ಯಾರಂಟಿ ಯೋಜನೆಗಳು ಬೇಡ. ಗ್ಯಾರಂಟಿಗಾಗಿ ಮೀಸಲಿಟ್ಟಿರುವ ಹಣವನ್ನು ಕೃಷಿ ಮೂಲಸೌಕರ್ಯ ಹಾಗೂ ಸಾಮೂಹಿಕ ಅಭಿವೃದ್ಧಿಗೆ ಬಳಸಬೇಕು ಎಂದು ಅಖಂಡ ಕರ್ನಾಟಕ ರೈತ ಸಂಘದ ಮಹಿಳಾ ರಾಜ್ಯಾಧ್ಯಕ್ಷೆ ಶಾಂತ ಅಶೋಕ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ರೈತರು ಹಾಗೂ ಮಹಿಳಾ ರೈತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ಪ್ರಸ್ತಾಪಿಸಿದ ಅವರು, ಈ ಬಾರಿಯ ಬಜೆಟ್‌ನಲ್ಲಿಯೇ ತುರ್ತು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ:
ಜಿಲ್ಲೆಯಲ್ಲಿ ಈ ವರ್ಷ ಶೇ. ೨೦ ರಷ್ಟು ಮಳೆ ಕೊರತೆಯಾಗಿದ್ದು, ವಾಣಿವಿಲಾಸ ಮತ್ತು ತುಂಗಭದ್ರಾ ಜಲಾಶಯಗಳಲ್ಲಿ ನೀರಿನ ಅಭಾವ ತೀವ್ರಗೊಂಡಿದೆ. ಹೀಗಾಗಿ ಚಿತ್ರದುರ್ಗ ಜಿಲ್ಲೆಯನ್ನು ಎಂದು ಘೋಷಿಸಬೇಕು. ಸಂಕಷ್ಟದಲ್ಲಿರುವ ಒಣ ಬೇಸಾಯದ (ಒಣ ಭೂಮಿ) ರೈತರಿಗೆ ಪ್ರತಿ ಎಕರೆಗೆ ೨೫,೦೦೦ ಹಾಗೂ ನೀರಾವರಿ ಭೂಮಿಗೆ ಪ್ರತಿ ಎಕರೆಗೆ ೩೫,೦೦೦ ರೂ.ಗಳಂತೆ ತುರ್ತು ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.
ಗ್ಯಾರಂಟಿ ಯೋಜನೆಗಳ ಹಣವನ್ನು ನೇರವಾಗಿ ಜಿಲ್ಲೆಯ ಕೆರೆಗಳನ್ನು ತುಂಬಿಸಲು, ಟಿಎಪಿಸಿಎಂಎಸ್ ಗೋದಾಮುಗಳ ನಿರ್ಮಾಣಕ್ಕೆ ಹಾಗೂ ಗ್ರಾಮೀಣ ಕೃಷಿ ಮಾರುಕಟ್ಟೆಗಳ ಸುಧಾರಣೆಗೆ ವಿನಿಯೋಗಿಸಬೇಕು. ಟಿಎಪಿಸಿಎಂಎಸ್ ಮತ್ತು ಸಹಕಾರ ಸಂಘಗಳ ಮೂಲಕ ಮಹಿಳಾ ಸ್ವಸಹಾಯ ಗುಂಪುಗಳಿಗೆ ೫ ಲಕ್ಷದವರೆಗೆ ಬಡ್ಡಿರಹಿತ ಸಾಲ ಸೌಲಭ್ಯ ನೀಡಬೇಕು. ಬಾಕಿ ಇರುವ ಕಾರ್ಡ್‌ಗಳ ವಿತರಣೆಯನ್ನು ಚುರುಕುಗೊಳಿಸಬೇಕು ಎಂದರು.
ರೈತ ವಿರೋಧಿಯಾಗಿರುವ ’ವಿದ್ಯುತ್ ಖಾಸಗೀಕರಣ ಕಾಯ್ದೆ-೨೦೨೬’ ಅನ್ನು ಸಂಪೂರ್ಣವಾಗಿ ಹಿಂಪಡೆಯಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ ೭ ಗಂಟೆಗಳ ಕಾಲ ನಿರಂತರ ಉಚಿತ ವಿದ್ಯುತ್ ಪೂರೈಸಬೇಕು. ’ರಸ್ತೆ ಇಲ್ಲದೆ ಗ್ರಾಮಕ್ಕೆ ಅಭಿವೃದ್ಧಿ ಇಲ್ಲ. ಸಾಲ ಇಲ್ಲದೆ ರೈತನಿಗೆ ಬದುಕಿಲ್ಲ’ ಎಂಬ ಬಾಬಾಗೌಡ ಪಾಟೀಲರ ಐತಿಹಾಸಿಕ ಘೋಷಣೆಯನ್ನು ಉಲ್ಲೇಖಿಸಿದ ಅವರು, ಮುಖ್ಯಮಂತ್ರಿಗಳು ಈ ಬಜೆಟ್‌ನಲ್ಲಿ ಜಿಲ್ಲೆಯ ರೈತರನ್ನು ರಕ್ಷಿಸಲು ವಿಶೇಷ ಪ್ಯಾಕೇಜ್ ಘೋಷಿಸದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.



