November 1, 2026
Sunday, November 1, 2026
spot_img

ಉದ್ಯೋಗದಲ್ಲಿ ಕನ್ನಡಿಗರಿಗೆ ಆದ್ಯತೆ, ನಾಮಫಲಕದಲ್ಲಿ ಕನ್ನಡ ಕಡ್ಡಾಯ: ಸಚಿವ ರಾಮಲಿಂಗಾರೆಡ್ಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯದ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಕೋಲಾರದ ಗಾಂಧಿವನದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಕುರಿತು ಈಗಾಗಲೇ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗಿದೆ ಎಂದರು.

ಸರೋಜಿನಿ ಮಹಿಷಿ ವರದಿಯಂತೆ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸಲು ಸರ್ಕಾರ ಒತ್ತಾಯಿಸುತ್ತಿದೆ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ದೊಡ್ಡ ಉದ್ಯಮಿಗಳ ಸಭೆ ಕರೆದು ಈ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿಸಿದರು.

ಹೊರರಾಜ್ಯದವರು ಕರ್ನಾಟಕಕ್ಕೆ ಬರಬಹುದು. ಆದರೆ ಸ್ಥಳೀಯ ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ಸಿಗಬೇಕು ಎಂದ ಅವರು, ವಾಣಿಜ್ಯ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯವಾಗಿದ್ದು, ಎಲ್ಲರೂ ನಿಯಮ ಪಾಲಿಸಬೇಕು ಎಂದು ಹೇಳಿದರು. ಹೊರರಾಜ್ಯದವರು ಕನ್ನಡ ಕಲಿಯುವುದರಿಂದ ವ್ಯಾಪಾರ ವಹಿವಾಟಿಗೂ ಅನುಕೂಲವಾಗಲಿದೆ ಎಂದರು.

ಇದನ್ನೂ ಓದಿ:

ದೀಪಾವಳಿ ಸಂದರ್ಭದಲ್ಲಿ ಪಟಾಕಿ ಬಳಕೆ ಕಡಿಮೆ ಮಾಡಿ, ಹಸಿರು ಪಟಾಕಿಗಳಿಗೆ ಆದ್ಯತೆ ನೀಡಬೇಕು. ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಿ, ಪರಿಸರ ಸ್ನೇಹಿ ಹಬ್ಬ ಆಚರಿಸುವಂತೆ ಮನವಿ ಮಾಡಿದರು.

2011ರ ಕೆಎಎಸ್ ನೇಮಕಾತಿ ರದ್ದು ವಿಚಾರವಾಗಿ ಮಾತನಾಡಿದ ಸಚಿವರು, ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

Must Read