Friday, August 19, 2022

Latest Posts

ತಾಲ್ಲೂಕು ಕೇಂದ್ರಗಳಲ್ಲಿ ಕನ್ನಡ ಭವನಕ್ಕೆ ಪ್ರಥಮ ಆದ್ಯತೆ

 

ಹೊಸದಿಗಂತ ವರದಿ, ಯಾದಗಿರಿ:

ಬರುವ ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆಯಲ್ಲಿ ರಾಜ್ಯದ ಎಲ್ಲಾ ಪರಿಷತ್ತಿನ ಮತದಾರರು ನನ್ನನ್ನು ಬೆಂಬಲಿಸಬೇಕು ಬರುವ ದಿನಗಳಲ್ಲಿ ರಾಜ್ಯದ ಎಲ್ಲಾ ಭಾಗದಲ್ಲಿ ಕನ್ನಡ ಭಾಷೆ, ಸಾಹಿತ್ಯ, ಕಲೆ, ಉಳಿಸಿ ಬೆಳೆಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿ ಶೇಖರಗೌಡ ಮಾಲಿಪಾಟೀಲ್ ಹೇಳಿದರು.

ನಗರದ ಪ್ರತಿಕಾ ಭವನದಲ್ಲಿ ಸುದ್ದಿ ಗೋಷ್ಠಿ ಯಲ್ಲಿ ಮಾತನಾಡಿದ ಅವರು, ನಾನು ಕಳೆದ 25 ವರ್ಷದಿಂದ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ. ಅಲ್ಲದೇ ಎರಡು‌ ಬಾರಿ ಕೊಪ್ಪಳ ಜಿಲ್ಲಾ ಕಸಾಪ ಜಿಲ್ಲಾಧ್ಯಕ್ಷನಾಗಿ ಕನ್ಮಡ ಕಟ್ಟುವ ಕೆಲಸ ಮಾಡಿದ್ದೇನೆ. ಗಂಗಾವತಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಿ, ಯಶಸ್ವಿಗೆ ಶ್ರಮಿಸಿದ್ದೇನೆ ಎಂದು ತಿಳಿಸಿದರು.

ನಾನು ಅಧ್ಯಕ್ಷ ನಾಗಿ ಅಯ್ಕೆಯಾದರೆ ಮೋದಲು ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕಾ ಕೇಂದ್ರಗಳಲ್ಲಿ ಕನ್ನಡ ಸಾಹಿತ್ಯ ಭವನಗಳನ್ನು ನಿರ್ಮಾಣಕ್ಕೆ ಒತ್ತು ನೀಡುತ್ತೇನೆ. ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ಕಸಾಪ ಮಾದರಿ ಕನ್ನಡ ಶಾಲೆ ಸ್ಥಾಪನೆಗೆ ಕ್ರಮ ಕೈಗೊಂಡು ಪ್ರತಿ ವರ್ಷ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ವಿವಿಯ ಸಾಹಿತ್ಯ ಸಾಂಸ್ಕೃತಿಕ ಸಮಾವೇಶಗಳನ್ನು ಆಯೋಜನೆ ಮಾಡುತ್ತೇನೆ. ಜೊತೆಗೆ ಯುವ ಬರಹಗಾರರಿಗೆ ಪರಿಷತ್ತಿನಿಂದ ಅಗತ್ಯ ಸಹಾಯ ಸಹಕಾರ ನೀಡುತ್ತೇನೆ ಎಂದರು.

ಕನ್ನಡ ಚಳುವಳಿ, ರೈತ ಹಾಗೂ ಜನಪರ ಜಳುವಳಿ, ಕೈಗಾರಿಕೆ ಮತ್ತು ವಾಣಿಜ್ಯೋದ್ಯಮಗಳ ಕನ್ನಡ ಸಂಘಗಳ ಸಮಾವೇಶ ನಿರಂತರ ಹಮ್ಮಿಕೊಳ್ಳುವ ಮೂಲಕ ಗಡಿಯಲ್ಲಿ ಕನ್ನಡ ಭಾಷೆ ಗಟ್ಟಿಯಾಗಿ ಪ್ರಗತಿಯಾದರೆ ಮಾತ್ರ ನಾಡು ಸುರಕ್ಷಿತ ಎಂದು ಅಭಿಪ್ರಾಯ ಪಟ್ಟರು.

ರಾಜ್ಯದಲ್ಲಿ 355 ಲಕ್ಷ ಅಧಿಕ ಪರಿಷತ್ತಿನ ಮತದಾರರಿದ್ದಾರೆ. ಅದರಲ್ಲಿ ಉತ್ತರ ಕರ್ನಾಟಕದ 16 ಜಿಲ್ಲೆಗಳ 155 ಲಕ್ಷ ಮತದಾರರಿದ್ದಾರೆ. ಕಲ್ಯಾಣ ಕರ್ನಾಟಕದ 77 ಜಿಲ್ಲೆಗಳಲ್ಲಿ 55 ಸಾವಿರ ಮತದಾರರು ಇದ್ದಾರೆ. ಯಾದಗಿರಿ ಜಿಲ್ಲೆಯಲ್ಲಿ 4600 ಮತದಾರರಿದ್ದಾರೆ. ನಾನು ಕಳೆದ ಎರಡು ವರ್ಷಗಳಿಂದ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡು ಅಲ್ಲಿನ‌ ಸಾಹಿತಿಗಳನ್ನು ಮತದಾರರು ಭೇಟಿ ಯಾಗಿ ನನ್ನ ಕನಸಿನ ಯೋಜನೆ ಮಾಹಿತಿ ನೀಡಿ ಬೆಂಬಲ ಕೋರಿದ್ದೇನೆ. ಅವರಿಂದ ಉತ್ತಮ ಪ್ರತಿಕ್ರಿಯೆ ‌ವ್ಯಕ್ತವಾಗಿದೆ.

ಈ ಬಾರಿ ಕಲ್ಯಾಣ ಕರ್ನಾಟಕ ದಿಂದ ಸ್ಪರ್ಧಿಸಿರುವ ಪ್ರಬಲ ಅಭ್ಯರ್ಥಿಯಾಗಿರುವ ನನ್ನನ್ನು ಎಲ್ಲರೂ ಮತ ನೀಡುವ ಮೂಲಕ ಕಲ್ಯಾಣ ಕರ್ನಾಟಕದವರು ಕೇಂದ್ರ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಆಯ್ಕೆಯಾಗಲು ಕಾರಣಿಭೂತರಾಗಬೇಕೆಂದು ವಿನಂತಿಸಿಕೊಂಡರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!