Thursday, August 11, 2022

Latest Posts

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಚಾರಣಾಧೀನ ಕೈದಿ ಪರಾರಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕಲಬುರಗಿ:

ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಚಾರಣಾಧೀನ ಕೈದಿ ಪರಾರಿಯಾಗಿರುವ ಘಟನೆ ಬುಧವಾರ ನಸುಕಿನ ಜಾವ ನಡೆದಿದೆ.
ಸಿದ್ದಪ್ಪಾ ಅಲ್ಲೂರ (22) ಪರಾರಿಯಾಗಿರುವ ಕೈದಿ. ಈತ ಆಸ್ಪತ್ರೆಯ ಕಿಟಕಿಯಿಂದ ಜಿಗಿದು ಪಾರಾಗಿದ್ದಾನೆ.
ಸಿದ್ದಪ್ಪಾ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಅಲ್ಲೂರ ಬಿ ಗ್ರಾಮದ ನಿವಾಸಿಯಾಗಿದ್ದು, ಎರಡು ತಿಂಗಳ ಹಿಂದಷ್ಟೆ ಸ್ನೇಹಿತನ ಕೊಲೆ ಮಾಡಿ ಜೈಲು ಪಾಲಾಗಿದ್ದನು.
ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಸೇರಿದ ಸಿದ್ದಪ್ಪ ನಾಲ್ಕು ದಿನಗಳ ಹಿಂದೆ ಅಸಹಜ ವರ್ತನೆಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ಕುರಿತು ಬ್ರಹ್ಮಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss