ಹೊಸದಿಗಂತ ಡಿಜಿಟಲ್ ಡೆಸ್ಕ್:
ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಆಗಿರುವ ಕೊಲೆ ಆರೋಪಿ ನಟ ದರ್ಶನ್ ಗೆ ಹೊಸ ಕೈದಿ ನಂಬರ್ ನೀಡಲಾಗಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿತರಾಗಿದ್ದ ದರ್ಶನ್ ಅವರಿಗೆ ರಾಜಾತಿಥ್ಯ ನೀಡಿರುವ ಹಿನ್ನೆಲೆ ಬಳ್ಳಾರಿ ಜೈಲಿಗೆ ವರ್ಗಾಯಿಸಲಾಗಿದೆ.
ಪೊಲೀಸ್ ಕಟ್ಟುನಿಟ್ಟಿನ ಕ್ರಮದಲ್ಲಿ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಕಳುಹಿಸಲಾಗಿದೆ. ಬಳ್ಳಾರಿ ಜೈಲಿಗೆ ಸ್ಥಳಾಂತರಗೊಂಡ ಬಳಿಕ ಜೈಲು ಅಧಿಕಾರಿಗಳು ಆರೋಪಿಯ ಹೆಸರು ಸೇರಿದಂತೆ ವಿವಿಧ ಮಾಹಿತಿಗಳನ್ನು ದಾಖಲಿಸಿಕೊಂಡು ಹೊಸ ಕೈದಿಯ ನಂಬರ್ ನೀಡಿದ್ದಾರೆ.
ಬಳ್ಳಾರಿ ಜೈಲಿನಲ್ಲಿ ದರ್ಶನ್ ಗೆ ವಿಚಾರಣಾಧೀನ ಕೈದಿ ನಂ.511 ಸಂಖ್ಯೆ ನಿಡಲಾಗಿದೆ.