ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಕದನ: ಬಾತ್‌ರೂಮ್‌ ಟೈಲ್ಸ್‌ನಿಂದ ಹೊಡೆದಾಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ನಡುವೆ ಮಾರಾಮಾರಿಯಾಗಿದ್ದು, ಬಾತ್‌ರೂಮ್‌ ಟೈಲ್ಸ್‌ನಿಂದ ಹೊಡೆದಾಟ ನಡೆದಿದೆ.

ಈ ಹಲ್ಲೆಯಿಂದ ಓರ್ವ ಕೈದಿಗೆ ತಲೆಗೆ ಗಂಭೀರ ಗಾಯವಾಗಿದೆ. ಆತನನ್ನು ತಕ್ಷಣ ವಿಕ್ಟೋರಿಯಾ ಆಸ್ಪತ್ರೆಗೆ  ದಾಖಲಿಸಲಾಗಿದೆ. ಮತ್ತೊಬ್ಬ ಕೈದಿಗೆ ಜೈಲು ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗಿದೆ.

ಈ ಘಟನೆ ಸಂಬಂಧ ಜೈಲಿನ ಉಪ ಅಧೀಕ್ಷಕ ಇಮಾಮ್‌ಸಾಬ್ ಮ್ಯಾಗೇರಿ ದೂರು ನೀಡಿದ್ದು, ವಿಚಾರಣಾಧೀನ ಕೈದಿ ಸೂರ್ಯಪ್ರಕಾಶ್ (24) ವಿರುದ್ಧ ದೂರು ದಾಖಲಾಗಿದ್ದು, ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!