ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳ್ಳಂಬೆಳಗ್ಗೆ ಖಾಸಗಿ ಬಸ್ಗೆ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದ ಘಟನೆ ಕೂಡ್ಲಿಗಿ ತಾಲೂಕಿನ ಕಾನಾಹೊಸಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇಂದು ನಡೆದಿದೆ.
ಬೆಂಗಳೂರಿನಿಂದ ಹೊಸಪೇಟೆ ಮಾರ್ಗವಾಗಿ ರಾಯಚೂರು ಜಿಲ್ಲೆಯ ಮಸ್ಕಿ, ಹಟ್ಟಿಗೆ ತೆರಳುತ್ತಿದ್ದ ಬಸ್ನ ಟಯರ್ ಸ್ಫೋಟಗೊಂಡಿದ್ದು, ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬಸ್ನಲ್ಲಿದ್ದ 60 ಮಂದಿ ಪ್ರಯಾಣಿಕರು ಎಚ್ಚೆತ್ತು ಬಸ್‌ನಿಂದ ಕೂಡಲೇ ಕೆಳಗಿಳಿದ ಪರಿಣಾಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಕಿ ನಂದಿಸುವಲ್ಲಿ ಸಿಬ್ಬಂದಿ ಹಾಗೂ ಪ್ರಯಾಣಿಕರು ನಡೆಸಿದ ಪ್ರಯತ್ನ ವಿಫಲವಾಗಿದ್ದು, ಬೆಂಕಿಯ ಕೆನ್ನಾಲಿಗೆಗೆ ವಾಹನ ಸುಟ್ಟು ಕರಕಲಾಗಿದೆ.
ಕೂಡ್ಲಿಗಿ ತಾಲೂಕಿನ ಖಾನಾಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.