ಹೊಸದಿಗಂತ ಡಿಜಿಟಲ್ ಡೆಸ್ಕ್:
ಖಾಸಗಿ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಪರಿಣಾಮ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬುಡ್ಡಹಳ್ಳಿಯಲ್ಲಿ ನಡೆದಿದೆ.
ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, 10 ಮಂದಿ ಗಾಯಗೊಂಡಿದ್ದಾರೆ, ಗಾಯಾಳುಗಳನ್ನು ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗಿದ್ದು. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.