September 30, 2026
Wednesday, September 30, 2026
spot_img

ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ಸಾ*ವು, ಹಲವರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ ಭೀಕರ ಅಪಘಾತಕ್ಕೀಡಾಗಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಾಗಮಂಗಲದ ಲಾಂಕೋ ಟೋಲ್ ಗೇಟ್ ಸಮೀಪ ನಡೆದಿದೆ.

ಬೆಂಗಳೂರಿಗೆ ತೆರಳುತ್ತಿದ್ದ ಐಷಾರಾಮಿ ಸುಗಮ ಟ್ರಾವೆಲ್ಸ್‌ ಬಸ್‌ ಹೆದ್ದಾರಿಯ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಪ್ರಯಾಣಿಕ ಹಾಗೂ ಬಸ್‌ ಕ್ಲೀನರ್‌ ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಬೆಳ್ಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅತಿಯಾದ ವೇಗವೇ ಅಪಘಾತಕ್ಕೆ ಕಾರಣ

ಖಾಸಗಿ ಬಸ್‌ ತೀವ್ರ ವೇಗದಲ್ಲಿ ಹೋಗುತ್ತಿತ್ತು. ಸೈನ್‌ ಬೋರ್ಡ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಇಡೀ ಬಸ್‌ ಪಲ್ಟಿಯಾಗಿದೆ. ಬೆಂಗಳೂರಿನ ಕಸ್ತೂರಿ ಶಾನ್‌ ಬಾಗ್‌ ಹಾಗೂ ಬಸ್‌ ಕ್ಲೀನರ್‌ ಅಶೋಕ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Must Read