March 5, 2026
Thursday, March 5, 2026
spot_img

ಹುಲಿಕಲ್ ಘಾಟ್‌ನಲ್ಲಿ ಗುಡ್ಡಕ್ಕೆ ಖಾಸಗಿ ಬಸ್‌ ಡಿಕ್ಕಿ: ಮಗು ಸಾವು, ಮೂವರಿಗೆ ಗಂಭೀರ ಗಾಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಶಿವಮೊಗ್ಗದ ಹೊಸನಗರ ತಾಲೂಕಿನ ಹುಲಿಕಲ್ ಘಾಟ್‌ನಲ್ಲಿ ಗುಡ್ಡಕ್ಕೆ ಖಾಸಗಿ ಬಸ್‌ ಡಿಕ್ಕಿಯಾಗಿ ಮಗು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

ನಿದ್ದೆಯ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ದುರ್ಘಟನೆ ನಡೆದಿದೆ. ಗಂಭೀರ ಗಾಯಗೊಂಡವರಲ್ಲಿ ಶರೀಫಾಬಿ (57), ಇಮಾಮ್ ಸಾಬ್ (73), ಸಫಾನ (28) ಎಂಬುವರನ್ನು ಉಡುಪಿ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಾವಣಗೆರೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ದುರ್ಗಾಂಬ ಬಸ್ ಅಪಘಾತಕ್ಕೀಡಾಗಿದ್ದು, ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಘಟನೆ ನಡೆಯುತ್ತಿದ್ದಂತೆ ನಗರ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !