ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಲ್ಲಿ ಖಾಸಗಿ ಬಸ್ ಮೇಲ್ಸೇತುವೆಯಿಂದ ಬಿದ್ದು ಇಬ್ಬರು ಸಾವನ್ನಪ್ಪಿದ್ದು, 40 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಶಿವಪುರಿ ಜಿಲ್ಲೆಯ ಪಿಚೋರ್ ಪಟ್ಟಣಕ್ಕೆ ಬಸ್ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಪಚೋರ್ ಪಟ್ಟಣದ ಬಳಿ ಮಧ್ಯರಾತ್ರಿ 1:30 ರ ಸುಮಾರಿಗೆ ಮೇಲ್ಸೇತುವೆಯಿಂದ ಬಿದ್ದಿದೆ ಎಂದು ಪಚೋರ್ ಪೊಲೀಸ್ ಠಾಣೆಯ ಉಸ್ತುವಾರಿ ಆಕಾಂಶಾ ಶರ್ಮಾ ತಿಳಿಸಿದ್ದಾರೆ.
ಮೃತರಲ್ಲಿ ಒಬ್ಬನನ್ನುಹರ್ಜತ್ ಸಿಂಗ್ (28) ಎಂದು ಗುರುತಿಸಲಾಗಿದೆ. ಇನ್ನೊಬ್ಬನ ಗುರುತು ಇನ್ನು ಪತ್ತೆಯಾಗಿಲ್ಲ. ಅಪಘಾತದಲ್ಲಿ 19 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಇಂದೋರ್‌ನ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಉಳಿದವರು ಶಾಜಾಪುರ, ಬಯೋರಾ ಮತ್ತು ಪಚೋರ್‌ನ ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ವೇಳೆ ಚಾಲಕ ಮತ್ತು ಕಂಡಕ್ಟರ್ ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳದಲ್ಲಿ ಶೋಧ ಕಾರ್ಯ ನಡೆಯುತ್ತಿದೆ ಎಂದು ವರದಿಯಾಗಿದೆ. ಇಬ್ಬರ ವಿರುದ್ಧವು ದೂರ ದಾಖಲಿಸಲಾಗಿದೆ.