ಕಂದಕಕ್ಕೆ ಉರುಳಿದ ಖಾಸಗಿ ಬಸ್: 7 ಮಂದಿ ದಾರುಣ ಸಾವು, 15 ಜನರ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಸಿಕ್-ಗುಜರಾತ್ ಹೆದ್ದಾರಿಯಲ್ಲಿ ಖಾಸಗಿ ಬಸ್‌ವೊಂದು ಕಂದಕಕ್ಕೆ ಉರುಳಿದ ಪರಿಣಾಮ 7 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 15 ಜನರು ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ.

ಬೆಳಗ್ಗೆ 5:30ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ನಾಸಿಕ್‌ನಿಂದ ಗುಜರಾತ್‌ಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. 200 ಅಡಿ ಆಳದ ಕಂದಕ್ಕೆ ಬಸ್ ಉರುಳಿದ್ದು, 7 ಜನರು ಸಾವನ್ನಪ್ಪಿದ್ದಾರೆ.

ಮೃತಪಟ್ಟವರು ಹಾಗೂ ಗಾಯಗೊಂಡ ಪ್ರಯಾಣಿಕರು ಮಧ್ಯಪ್ರದೇಶದವರು ಎಂದು ತಿಳಿಯಲಾಗಿದ್ದು, ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!